Tuesday, April 13, 2021

ಅಂಫಾನ್ ಚಂಡಮಾರುತಕ್ಕೆ ಪಶ್ಚಿಮ ಬಂಗಾಳದಲ್ಲಿ 12 ಬಲಿ

ಕೋಲ್ಕತ್ತಾ: ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಕನಿಷ್ಠ 12 ಜನರನ್ನು ಬಲಿ ಪಡೆದಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ವಿಷಯ ತಿಳಿಸಿದ್ದು, ಉತ್ತರ ಪರಗಣ ಹಾಗೂ ದಕ್ಷಿಣ ಪರಗಣ ಜಿಲ್ಲೆಯಲ್ಲೇ ಸುಮಾರು 10 ಜನ ಮೃತಪಟ್ಟಿದ್ದಾರೆ ಎಂದು ಸಿಎಂ ಹೇಳಿದ್ದಾರೆ.
ಹೌರಾ, ಕೋಲ್ಕತ್ತಾ, ಪಶ್ಚಿಮ ಮಿಡ್ನಾಪುರ್, ಪೂರ್ವ ಮಿಡ್ನಾಪುರ್‌ನಲ್ಲಿ ಹೆಚ್ಚು ಹಾನಿ ಸಂಭವಿಸಿದೆ. ಬಂಗಾಳಕೊಲ್ಲಿಯಲ್ಲಿ ಜನಿಸಿ, ಭಾರತದ ಪೂರ್ವ ಕರಾವಳಿಗೆ ಅಪ್ಪಳಿಸಿರುವ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಅಟ್ಟಹಾಸ ಮೆರೆಯುತ್ತಿದೆ. 160 ರಿಂದ 180 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಅಂಫಾನ್‌ ನಿಂದ ಹಾನಿಯ ಬಗ್ಗೆ ಲೆಕ್ಕ ಹಾಕಲು ಕನಿಷ್ಠ ಒಂದು ವಾರ ಬೇಕು. ಚಂಡಮಾರುತ ಮಾಡಿರುವ ಹಾನಿ ಕೋವಿಡ್ 19 ಗಿಂತ ಹತ್ತು ಪಟ್ಟು ದೊಡ್ಡದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!