Wednesday, July 6, 2022

ಅಮಿತ್ ಶಾಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು

Follow Us

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಅವರ ಕೋವಿಡ್-19 ಟೆಸ್ಟ್ ರಿಸಲ್ಟ್ ಪಾಸಿಟಿವ್ ಹಿನ್ನೆಲೆಯಲ್ಲಿ ಅವರು ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಲದಿನಗಳಿಂದ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಅಮಿತ್ ಶಾ ಆರೋಗ್ಯ ತಪಾಸಣೆಗೆ ಒಳಗಾಗಿದ್ದರು. ಈ ವೇಳೆ ಅವರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಶಾ, ನಾನು ಕೊರೋನಾ ಸೋಂಕಿಗೆ ಒಳಗಾಗಿದ್ದೇನೆ. ಆದರೆ ನನ್ನ ಆರೋಗ್ಯ ಚೆನ್ನಾಗಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ದಯವಿಟ್ಟು ಆರೋಗ್ಯ ತಪಾಸಣೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.
ಗೃಹ ಸಚಿವ ಅಮಿತ್ ಶಾ ಕಳೆದ ಕೆಲದಿನಗಳಲ್ಲಿ ಹಲವು ಸಭೆಗಳಲ್ಲಿ ಪಾಲ್ಗೊಂಡಿದ್ದರು. ಮಾತ್ರವಲ್ಲದೇ ಇನ್ನೆರಡು ದಿನದಲ್ಲಿ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಶಿಲಾನ್ಯಾಸ ಸಮಾರಂಭದಲ್ಲೂ ಅವರು ಪಾಲ್ಗೊಳ್ಳಬೇಕಿತ್ತು. ಇದೀಗ ಕೊರೋನಾ ಸೋಂಕು ಕಾಣಿಸಿಕೊಂಡಿರುವುದರಿಂದ ಅವರು ರಾಮ ಜನ್ಮಭೂಮಿಗೆ ತೆರಳುವ ಕಾರ್ಯಕ್ರಮ ರದ್ದಾಗಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ...

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಫೈರಿಂಗ್...

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇಬ್ಬರು ಸಚಿವರ ರಾಜ್ಯಸಭಾ ಸದಸ್ಯ...
- Advertisement -
error: Content is protected !!