ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರು ಪೂರ್ಣ ಗುಣಮುಖರಾಗಿದ್ದರು. ಇದೀಗ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿರುವ ಕಾರಣ ತಿಳಿದು ಬಂದಿಲ್ಲ.
ಆಸ್ಪತ್ರೆಯಲ್ಲಿ ಸಾಮಾನ್ಯ ವೈದ್ಯಕೀಯ ತಪಾಸಣೆಗೆ ಅಮಿತ್ ಶಾ ಒಳಗಾಗಲಿದ್ದಾರೆ ಎಂದು ವರದಿಯಾಗಿದೆ. 15 ದಿನಗಳ ಹಿಂದೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಅಮಿತ್ ಶಾ, ತಮ್ಮ ಮನೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದರು.