Saturday, April 1, 2023

ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಬಂಧನ

Follow Us

ಬೆಂಗಳೂರು: ಚಿಕ್ಕಮಗಳೂರಿನ ಕೊಪ್ಪ ಮೂಲದ ಯುವತಿ ಅಮೂಲ್ಯ ಲಿಯೋನ(19)ಳನ್ನು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆರೋಪದಡಿ ನಗರದ ಉಪ್ಪಾರಪೇಟೆ ಠಾಣಾ ಪೊಲೀಸರು ವಶಕ್ಕೆ ಪಡೆದರು.
ನಗರದ ಸ್ವಾತಂತ್ರ ಉದ್ಯಾನವನ ಮೈದಾನದಲ್ಲಿ ಗುರುವಾರ ಹಿಂದೂ, ಮುಸ್ಲಿಂ, ಸಿಖ್, ಈಸಾಯಿ ಫೆಡರೇಶನ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ, ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಪ್ರಕ್ರಿಯೆ ವಿರೋಧಿಸಿ ಬೃಹತ್ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ್, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾಳೆ.
ಪಾಕ್ ಪರ ಘೋಷಣೆ ಕೂಗಿದಾಕ್ಷಣ ಅಲ್ಲಿದ್ದವರು ಒಂದು ಕ್ಷಣ ಮೌನಕ್ಕೆ ಶರಣಾದರು. ಅಮೂಲ್ಯ ಮೂರು ಬಾರಿ ಘೋಷಣೆ ಕೂಗಿದಳು. ತಕ್ಷಣ ಮಧ್ಯಪ್ರವೇಶಿಸಿದ ಆಯೋಜಕರು ಮೈಕ್ ಕಸಿದುಕೊಳ್ಳುತ್ತಿದ್ದಂತೆಯೇ, ಉಪ್ಪಾರಪೇಟೆ ಠಾಣೆಯ ಮಹಿಳಾ ಪೊಲೀಸರು ಆಕೆಯನ್ನು ವಶಕ್ಕೆ ಪಡೆದರು.
ಅಮೂಲ್ಯ ಘೋಷಣೆ ಕೂಗಿದಾಕ್ಷಣ ವಿಚಲಿತರಾದ ಎಐಎಂಐಎಂ ಅಧ್ಯಕ್ಷ, ಅಸಾದುದ್ದೀನ್ ಓವೈಸಿ ಅಮೂಲ್ಯಳ ಘೋಷಣೆಗೆ ತಮ್ಮ ಬೆಂಬಲವಿಲ್ಲ, ಹೀಗಾಗತ್ತೆ ಎಂದು ತಿಳಿದಿದ್ದರೆ ಈ ಕಾರ್ಯಕ್ರಮಕ್ಕೆ ಬರುತ್ತಲೇ ಇರಲಿಲ್ಲ ಎಂದರು.
ಪಾಕ್ ಪರ ಘೋಷಣೆ ಕೂಗಿದ ಆರೋಪದಡಿ ಅಮೂಲ್ಯ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಐಪಿಸಿ ಸೆಕ್ಷನ್ 124ಎ (ದೇಶದ್ರೋಹ) ಸೇರಿ ವಿವಿಧ ಕಾಯ್ದೆ ಅಡಿ ಎಫ್ ಐಆರ್ ದಾಖಲಿಸಲಾಗಿದೆ. ಅಮೂಲ್ಯ ಲಿಯೋನಾ ವಿರುದ್ಧ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 124ಎ 153 ಎ ಮತ್ತು 153 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಅಮೂಲ್ಯಳ ವಿರುದ್ಧ ರಾಜ್ಯದೆಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಹಲವೆಡೆ ಪ್ರತಿಭಟನೆಗಳು ನಡೆದಿವೆ. ಅಮೂಲ್ಯಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಇಂತಹ ಹೇಳಿಕೆಗಳಿಂದ ಮನಸ್ಸಿಗೆ ನೋವುಂಟಾಗುತ್ತದೆ. ಪ್ರಕರಣದ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಇಂತಹವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಅಮೂಲ್ಯಳನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅಮೂಲ್ಯ ನಗರದ ಎಂಎಂಕೆಆರ್ವಿ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿನಿ. ಈ ಹಿಂದೆಯೂ ಹಲವು ಸಭೆಗಳಲ್ಲಿ ಪ್ರಧಾನಿ ಮೋದಿ ವಿರುದ್ಧವೂ ಭಾಷಣ ಮಾಡಿದ್ದಳು.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!