Monday, May 17, 2021

ಫೋಟೋಗೆ ಪೋಸ್ ಕೊಡದ ಆನೆಗೆ ಥಳಿತ: ಮಾವುತನ ಸೆರೆ

newsics.com
ತ್ರಿಶೂರ್(ಕೇರಳ): ಫೋಟೋಗೆ ಪೋಸ್ ನೀಡಲಿಲ್ಲವೆಂಬ ಕಾರಣಕ್ಕೆ ಆನೆಯನ್ನು ಹಿಂಸಿಸಿದ ಘಟನೆ ತ್ರಿಶೂರ್’ನ ದೇವಾಲಯವೊಂದರಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಮಾವುತ ಕಣ್ಣನ್’ನನ್ನು ಬಂಧಿಸಲಾಗಿದೆ. ಆನೆಯನ್ನು ಪಂಬಡಿ ಸುಂದರನ್ ಎಂದು ಗುರುತಿಸಲಾಗಿದೆ. ತೊಟ್ಟಿಪಾಲ್ ಮಹಾವಿಷ್ಣು ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ.
ಚಲಕ್ಕುಡಿ ಅರಣ್ಯ ಇಲಾಖೆ ಅಧಿಕಾರಿ 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮಾವುತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಮಾವುತನನ್ನು ಬಂಧಿಸಿ ಇರಿಂಜಲಕುಡ ಕೋರ್ಟ್’ಗೆ ಹಾಜರುಪಡಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!