Tuesday, April 13, 2021

ಪ್ರೀತಿಸಿ ಮದುವೆಯಾಗಿದ್ದಕ್ಕೆ ಸಿಟ್ಟು; ಬೀಗರ ಮನೆಯ ಐವರ ಕೊಲೆ

ರಾಯಚೂರು: ಒಂದೇ ಮನೆಯ ಐವರನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಿದ ಅಮಾನವೀಯ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ಶನಿವಾರ ನಡೆದಿದೆ.
ಹುಡುಗನ ತಂದೆ ಈರಪ್ಪ (65), ತಾಯಿ ಸುಮಿತ್ರಮ್ಮ (55), ಸಹೋದರರಾದ ನಾಗರಾಜ (38), ಹನುಮೇಶ (40), ಸಹೋದರಿ ಶ್ರೀದೇವಿ (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಸಹೋದರಿಯರಾದ ರೇವತಿ (20), ತಾಯಮ್ಮ (25) ಕೂಡ ಗಾಯಗೊಂಡಿದ್ದಾರೆ.
ಮಕ್ಕಳ ಪ್ರೀತಿಯನ್ನು ಒಪ್ಪಿಕೊಳ್ಳದೆ ದ್ವೇಷ ಸಾಧಿಸಿ ಯುವತಿಯ ಕುಟುಂಬದವರು ಬೀಗರ ಮನೆಯ ಐವರನ್ನು ಕೊಲೆ ಮಾಡಿದ್ದಾರೆ.
ಒಂದು ವರ್ಷದಿಂದ ಪ್ರೀತಿಸುತ್ತಿದ್ದ ಒಂದೇ ಜಾತಿಯ ಮೌನೇಶ (21) ಮಂಜುಳಾ (18) ಗದಗದಲ್ಲಿ ಏಳು ತಿಂಗಳ ಹಿಂದೆ ಮದುವೆಯಾಗಿದ್ದರು. ಇವರ ವಿವಾಹವನ್ನು ಯುವತಿಯ ಮನೆಯವರು ಒಪ್ಪಿರಲಿಲ್ಲ. ಶನಿವಾರ ನೂತನ ದಂಪತಿ ಯುವತಿಯ ಮನೆಗೆ ಹೋಗಿದ್ದರು. ಇದನ್ನು ಸಹಿಸದ ಯುವತಿ ಮನೆಯವರು ರೇಗಾಡಿದ್ದರು. ಇದರಿಂದ ಜೀವಭಯದಿಂದ ಪ್ರೇಮಿಗಳು ಠಾಣೆಗೆ ದೂರು ನೀಡಲು ಹೋಗಿದ್ದರು. ಇದರಿಂದ ಕುಪಿತಗೊಂಡ ಯುವತಿ ಮನೆಯವರು ಹುಡುಗನ ಮನೆಗೆ ಬಂದು ಗಲಾಟೆ ಮಾಡಿ ಕೈಗೆ ಸಿಕ್ಕ ಕಬ್ಬಿಣದ ರಾಡು, ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಘಟನೆಯ ಸಂಬಂಧ ಐವರನ್ನು ವಶಕ್ಕೆ ಪಡೆದಿರುವ ಸಿಂಧನೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!