Saturday, November 27, 2021

ರಾಜ್ಯದಲ್ಲಿ ಮತ್ತೊಂದು ಸಾವು, ಮೃತರ ಸಂಖ್ಯೆ 12ಕ್ಕೇರಿಕೆ

Follow Us

ಬೆಂಗಳೂರು: ಬೆಳಗಾವಿಯಲ್ಲಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 80 ವರ್ಷದ ಮಹಿಳೆಯೊಬ್ಬರು ಬುಧವಾರ ಸಾವನ್ನಪ್ಪಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ತಿಳಿಸಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ಈವರೆಗೆ ಬೆಂಗಳೂರು ಇಬ್ಬರು, ಚಿಕ್ಕಬಳ್ಳಾಪುರದಲ್ಲಿ ಇಬ್ಬರು, ಕಲಬುರಗಿಯಲ್ಲಿ ಮೂವರು, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರದಲ್ಲಿ ತಲಾ ಒಬ್ಬರು ಕೊರೋನಾಗೆ ಬಲಿಯಾಗಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಬುಧವಾರ 19 ಜನರಿಗೆ ಕೊರೋನಾ ಸೋಂಕು ತಗುಲಿದೆ. ಸೋಂಕಿತರ ಸಂಖ್ಯೆ 279ಕ್ಕೆ ಏರಿಕೆಯಾಗಿರುವುದಾಗಿ ಸುರೇಶ ಕುಮಾರ್ ತಿಳಿಸಿದ್ದಾರೆ.
ಮೈಸೂರು ಹಾಗೂ ನಂಜನಗೂಡಿನಲ್ಲಿ 10 ಜನರಿಗೆ, ಬೆಂಗಳೂರಿನ ಇಬ್ಬರಿಗೆ, ಬಾಗಲಕೋಟೆಯಲ್ಲಿ ಇಬ್ಬರಿಗೆ, ಕಲಬುರಗಿಯಲ್ಲಿ ಒಬ್ಬರಿಗೆ, ವಿಜಯಪುರದ ಮೂವರಿಗೆ ಮತ್ತು ಬೆಳಗಾವಿಯ ಒಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ಸಚಿವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!