Wednesday, July 6, 2022

ಬೆಂಗಳೂರಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ

Follow Us

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಅಬ್ಬರ ಮುಂದುವರೆದಿದ್ದು, ಇನ್ನೂ ಒಂದು ವಾರ ಲಾಕ್ ಡೌನ್ ಮುಂದುವರೆಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಸೋಮವಾರ (ಜುಲೈ 20) ಟಾಸ್ಕ್ ಫೋರ್ಸ ಸಭೆ ನಡೆಯಲಿದ್ದು, ಸಭೆಯಲ್ಲಿ ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರೆಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಬೆಂಗಳೂರು ಲಾಕ್ ಡೌನ್ ಮುಂದುವರಿಕೆ ವಿಚಾರ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸಿಬ್ಬಂದಿ ನೇಮಕ ವಿಚಾರ, ವೆಂಟಿಲೇಟರ್ ಪೂರೈಕೆ, ಬೆಡ್ ಮೀಸಲಿಡುವ ವಿಚಾರ ಸೇರಿದಂತೆ ಹಲವು ವಿಚಾರಗಳು ಸಭೆಯಲ್ಲಿ ಚರ್ಚೆಯಾಗಲಿವೆ ಎಂದು ತಿಳಿದುಬಂದಿದೆ.
ಆದರೆ, ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಸಿಎಂ ಯಡಿಯೂರಪ್ಪ ಅವರಿಗೆ ಇಷ್ಟವಿಲ್ಲ ಎನ್ನಲಾಗಿದೆ. ತಜ್ಞರು, ಹಲವು ಸಚಿವರು, ಅಧಿಕಾರಿಗಳು ಹಾಗೂ ಬಿಬಿಎಂಪಿ ಆಡಳಿತ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಆಸಕ್ತಿ ಹೊಂದಿದೆ ಎನ್ನಲಾಗಿದೆ.

ಕಲಬುರಗಿಯಲ್ಲಿ ಜುಲೈ 27 ರವರೆಗೆ ಲಾಕ್ ಡೌನ್ ವಿಸ್ತರಣೆ

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!