Saturday, November 27, 2021

ಬೆಂಗಳೂರಲ್ಲಿ ಕೊರೋನಾಗೆ ಮತ್ತೊಬ್ಬರು ಬಲಿ

Follow Us

ಬೆಂಗಳೂರು: ರಾಜ್ಯದಲ್ಲಿ ಕೊರೋನಾಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಭಾನುವಾರ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ ಐದಕ್ಕೇರಿದೆ. 465ನೇ ಸೋಂಕಿತ 45 ವರ್ಷದ ಮಹಿಳೆ, ಏಪ್ರಿಲ್ 24ರಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಯನ್ನು ಪ್ರತ್ಯೇಕವಾಗಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ರಾಜ್ಯದಲ್ಲಿ ಭಾನುವಾರ ಹೊಸದಾಗಿ 3 ಕೊರೋನಾ ವೈರಸ್ ಕೇಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೊರೋನಾ ಸೋಂಕಿನ ಪ್ರಕರಣ ಸಂಬಂಧ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಭಾನುವಾರ ದಕ್ಷಿಣ ಕನ್ನಡದ ಓರ್ವ ಮಹಿಳೆಗೆ, ಕಲಬುರ್ಗಿಯ ಇಬ್ಬರಿಗೆ ಕೊರೋನಾ ಸೋಂಕು ಪಾಸಿಟಿವ್ ದೃಢಪಟ್ಟಿದೆ ಎಂಬುದಾಗಿ ತಿಳಸಿದೆ. ಹೀಗಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!