Saturday, November 26, 2022

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯಾಗಿ ಆಂಟೋನಿಯೊ ಗುಟೆರೆಸ್ ಪುನರಾಯ್ಕೆ

Follow Us

newsics.com

ನ್ಯೂಯಾರ್ಕ್: ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ ಆಂಟೋನಿಯೊ ಗುಟೆರೆಸ್ ಪುನರಾಯ್ಕೆಯಾಗಿದ್ದಾರೆ.

ಮುಂದಿನ ಐದು ವರ್ಷ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಶುಕ್ರವಾರ 193 ಸದಸ್ಯ ರಾಷ್ಟ್ರಗಳ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಗುಟೆರೆಸ್ ಅವರನ್ನು ಆಯ್ಕೆ ಮಾಡಲಾಗಿದೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ ಆಂಟೋನಿಯೊ ಗುಟೆರೆಸ್ ಅವರನ್ನೇ ಎರಡನೇ ಅವಧಿಗೆ ಆಯ್ಕೆ ಮಾಡಲು 15 ರಾಷ್ಟ್ರಗಳನ್ನು ಒಳಗೊಂಡಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಈ ಮೊದಲು ಶಿಫಾರಸು ಮಾಡಿತ್ತು.

ಬಾನ್ ಕಿ ಮೂನ್ ಉತ್ತರಾಧಿಕಾರಿಯಾಗಿ ಹಾಗೂ ವಿಶ್ವಸಂಸ್ಥೆಯ ಒಂಬತ್ತನೇ ಪ್ರಧಾನ ಕಾರ್ಯದರ್ಶಿಯಾಗಿ ಗುಟೆರೆಸ್ ಅವರು 2017ರ ಜನವರಿ 1ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಅವರ ಮೊದಲ ಅಧಿಕಾರಾವಧಿ ಡಿಸೆಂಬರ್ 31ರಂದು ಕೊನೆಗೊಳ್ಳಲಿದ್ದು, ಬಳಿಕ ಎರಡನೇ ಅವಧಿ 2022ರ ಜನವರಿ 1ರಿಂದ ಆರಂಭವಾಗಲಿದೆ.

72 ವರ್ಷದ ಗುಟೆರೆಸ್ 1995ರಿಂದ 2002ರ ವರೆಗೆ ಪೋರ್ಚುಗಲ್‌ನ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. 2005ರಿಂದ 2015ರವರೆಗೆ ವಿಶ್ವಸಂಸ್ಥೆಯಲ್ಲಿ ನಿರಾಶ್ರಿತರ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದಾರೆ.

ನಿಲ್ಲದ ಮಳೆ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಮೊದಲ‌ ದಿನದಾಟ ರದ್ದು

ನದಿಗಳ ನೀರಲ್ಲೂ ಕೊರೋನಾ‌ ವೈರಸ್ ಪತ್ತೆ!

ಮಿಲ್ಖಾ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!