Saturday, November 26, 2022

ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ ಎಂದ ಅಪೊಲೋ‌ ಆಸ್ಪತ್ರೆ

Follow Us

newsics.com

ಬೆಂಗಳೂರು: ನಟ ಸಂಚಾರಿ‌ ವಿಜಯ್ ಅವರ ಮೆದುಳು ನಿಷ್ಕ್ರಿಯವಾಗಿದೆ. ಇಂದು ಮಧ್ಯರಾತ್ರಿ ಬಳಿಕ ವಿಜಯ್ ಸಾವನ್ನು ಖಚಿತಪಡಿಸುವುದಾಗಿ ಅಪೊಲೊ‌ ಅಸ್ಪತ್ರೆ ಸ್ಪಷ್ಟಪಡಿಸಿದೆ.

ಸಿಎಂ ಯಡಿಯೂರಪ್ಪ, ಖ್ಯಾತ ನಟ ಸುದೀಪ್, ಮಾಜಿ ಸಚಿವ ಸಿ.ಟಿ. ರವಿ, ಸಂಸದೆ ಶೋಭಾ ಕರಂದ್ಲಾಜೆ ಮೊದಲಾದವರು ಸಂತಾಪ ಸೂಚಿಸಿ ಸುಮಾರು ಏಳು ಗಂಟೆ ಬಳಿಕ ಅಪೊಲೊ‌ ಆಸ್ಪತ್ರೆ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂಬುದನ್ನು ದೃಢಪಡಿಸಿದೆ.

ನಾಳೆ(ಜೂ.15) ಬೆಳಗ್ಗೆ ಎಂಟರಿಂದ ಹತ್ತರವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ‌ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ‌ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ನಿರ್ದೇಶಕ ಮನ್ಸೂರೆ ತಿಳಿಸಿದ್ದಾರೆ.

ಸಮಾಜಸೇವೆಯಲ್ಲೂ ತೊಡಗಿಸಿಕೊಂಡಿದ್ದ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ವಿಜಯ್ ಅವರ ಅಂಗಾಂಗಗಳನ್ನು ದಾನ ಮಾಡಿ‌ ಅವರ ಕುಟುಂಬಸ್ಥರು ಔದಾರ್ಯ ಮೆರೆದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!