ಬೆಂಗಳೂರು: ಹಣಕಾಸು ಅಕ್ರಮ ಪ್ರಕರಣದಲ್ಲಿ ಆದಾಯ ತೆರಿಗೆ(ಐಟಿ) ಇಲಾಖೆ ದಾಳಿಗೆ ಒಳಗಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೆ ಸಿಬಿಐ ಸಂಕಷ್ಟ ಎದುರಾಗಿದೆ.
ತಮ್ಮ ವಿರುದ್ಧ ರಾಜ್ಯಸರ್ಕಾರ ಸಿಬಿಐ ತನಿಖೆ ನಡೆಸಲು ಆದೇಶಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಆರ್.ನಟರಾಜ್ ಅವರು ಈ ಮೇಲ್ಮನವಿಯನ್ನು ವಜಾಗೊಳಿಸಿದ್ದಾರೆ.
ಬೆಂಗಳೂರಲ್ಲಿ ಕಂಟೈನ್ಮೆಂಟ್ ಝೋನ್’ಗಳದೇ ದರಬಾರು!
ನ್ಯಾಯಾಲಯ ಅರ್ಜಿ ವಜಾಗೊಳಿಸಿರುವುದರಿಂದ ಸಿಬಿಐ ಯಾವುದೇ ಕ್ಷಣದಲ್ಲಿ ಎಫ್ಐಆರ್ ದಾಖಳಿಸುವ ಸಾಧ್ಯತೆಯಿದೆ. ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪ ಎದುರಿಸುತ್ತಿರುವ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಈಗಾಗಲೇ ಒಪ್ಪಿಗೆ ಸೂಚಿಸಿದೆ.
ಡಿ.ಕೆ.ಶಿವಕುಮಾರ್ ಅವರ ಆಪ್ತ ಶಿವಣ್ಣ ಎಂಬುವರು ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ದೂರು ದಾಖಲಿಸಲಾಗಿದೆ. ಪ್ರಕರಣ ಕುರಿತು ಇನ್ನಷ್ಟು ತನಿಖೆಯ ಅಗತ್ಯವಿದೆ. ಇದರಲ್ಲಿ ಭಾರೀ ಪ್ರಮಾಣದ ಹಣದ ವಹಿವಾಟು ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ವಕೀಲ ಪ್ರಸನ್ನಕುಮಾರ್ ವಾದ ಮಂಡಿಸಿದ್ದರು.