ಬೆಂಗಳೂರು: 400 ಪ್ರಾಂಶುಪಾಲರು, 1600 ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಸದ್ಯದಲ್ಲೇ ಪ್ರಕ್ರಿಯೆ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.
ವಿಕಾಸಸೌಧದಲ್ಲಿ ಶುಕ್ರವಾರ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಂಶುಪಾಲರು, ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಆರ್ಥಿಕ ಇಲಾಖೆ ಈಗಾಗಲೇ ಒಪ್ಪಿಗೆ ನೀಡಿದೆ ಎಂದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಲಿಖಿತ ಪರೀಕ್ಷೆ ನಡೆಸಲಿದ್ದು, ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. ಆದರೆ ಸಂದರ್ಶನ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಸದ್ಯದಲ್ಲೇ 400 ಪ್ರಾಂಶುಪಾಲರು, 1600 ಸಹಾಯಕ ಪ್ರಾಧ್ಯಾಪಕರ ನೇಮಕ
Follow Us