Wednesday, July 6, 2022

ಅರವಿಂದ ಶ್ರೀವಾತ್ಸವ್ 598, ಅಭಿಜ್ಞಾ ರಾವ್ 596, ಕರೇಗೌಡ ದಾಸನಗೌಡರ್ 594 PUC ಟಾಪರ್ಸ್

Follow Us

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದೆ. 6 ಲಕ್ಷದ 75 ಸಾವಿರದ 277 ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಿದೆ. ಈ ಬಾರಿ ಶೇ. 61.80 ಫಲಿತಾಂಶ ಬಂದಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಹೆಚ್ಚಿನ ಪ್ರಮಾಣದಲ್ಲಿ ತೇರ್ಗಡೆಯಾಗಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ವಿಜ್ಞಾನ ವಿಭಾಗ
ವಿಜ್ಞಾನ ವಿಭಾಗದಲ್ಲಿ ಉಡುಪಿಯ ವಿದ್ಯೋದಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಅಭಿಜ್ಞಾ ರಾವ್ ಟಾಪರ್ ಆಗಿದ್ದಾರೆ. ಅಭಿಜ್ಞಾ ರಾವ್ ವಿಜ್ಞಾನ ವಿಭಾಗದಲ್ಲಿ 596 ಅಂಕಗಳನ್ನು ಗಳಿಸಿಕೊಂಡಿದ್ದು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾರೆ.
ಅಭಿಜ್ಞಾ ಪಿಸಿಎಂಸಿ ವಿಷಯಗಳಲ್ಲಿ ತಲಾ 100 , ಇಂಗ್ಲೀಷ್ ಭಾಷೆಯಲ್ಲಿ 96 ಹಾಗೂ ಸಂಸ್ಕೃತದಲ್ಲಿ 100 ಅಂಕ ಪಡೆದಿದ್ದಾರೆ.
ಇನ್ನು ಇದೇ ವಿಭಾಗದಲ್ಲಿ ಬೆಂಗಳೂರಿನ ಮಲ್ಲೇಶ್ವರಂನ ವಿದ್ಯಾಮಂದಿರ್ ಪಿ.ಯು ಕಾಲೇಜಿನ ಪ್ರೇರಣಾ ಕೂಡ 596 ಅಂಕ ಗಳಿಸಿದ್ದಾರೆ. ಆಕಾಂಕ್ಷಾ ಪೈ (595) ದ್ವಿತೀಯ ಹಾಗೂ ಯಶಸ್​ ಎಂ.ಎಸ್ (594) ತೃತೀಯ ಸ್ಥಾನ ಗಳಿಸಿಕೊಂಡಿದ್ದಾರೆ.
ವಾಣಿಜ್ಯ ವಿಭಾಗ
ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ವಿದ್ಯಾಮಂದಿರ್ ಪಿ.ಯು ಕಾಲೇಜಿನ ಅರವಿಂದ ಶ್ರೀವಾತ್ಸವ್ 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮಿಗ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಬೃಂದಾ ದ್ವಿತೀಯ ಸ್ಥಾನ (596), ಮಲ್ಲೇಶ್ವರಂ ವಿದ್ಯಾಮಂದಿರ್ ಪಿಯು ಕಾಲೇಜಿನ ಅಭಿಲಾಶ್ ಶರ್ಮಾ(595) ತೃತೀಯ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗ
ಬಳ್ಳಾರಿಯ ಕರೇಗೌಡ ದಾಸನ್ ಗೌಡರ್ 594 ಅಂಕ ಗಳಿಸಿ ಕಲಾ ವಿಭಾಗದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಸ್ವಾಮಿ (592) ದ್ವಿತೀಯ ಮೊಹಮ್ಮದ್​ ರಫೀಕ್ (591) ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!