Wednesday, May 18, 2022

ಹೆಲಿಕಾಪ್ಟರ್ ದುರಂತ: ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ಸಾವು

Follow Us

newsics.com

ಊಟಿ(ತಮಿಳುನಾಡು): ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಭಾರತದ ಸಿಡಿಎಸ್ ಬಿಪಿನ್ ರಾವತ್ ಕೊನೆಯುಸಿರೆಳೆದಿದ್ದಾರೆ.

ಭಾರತೀಯ ವಾಯುಸೇನೆ ಈ ಕುರಿತುಪ ಟ್ವಿಟರ್‌ನಲ್ಲಿ ಅಧಿಕೃತ ಮಾಹಿತಿ‌ ನೀಡಿದೆ. ಬಿಪಿನ್ ರಾವತ್ ಪತ್ನಿ‌ ಮಧುಲಿಕಾ ರಾವತ್ ಕೂಡ ಈ ದುರಂತದಲ್ಲಿ ಸಾವಿಗೀಡಾಗಿದ್ದಾರೆ.

ಇವರಲ್ಲದೆ ಬ್ರಿಗೇಡಿಯರ್ ಎಲ್.ಎಸ್. ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ಗುರುಸೇವಕ್ ಸಿಂಗ್, ಜಿತೇಂದ್ರಕುಮಾರ್, ವಿವೇಕ್ ಕುಮಾರ್, ಸಾಯಿತೇಜ, ಸತ್ಪಾಲ್, ಪೈಲಟ್ ಪೃಥ್ವಿಸಿಂಗ್ ಚೌಹಾಣ್ ಸಾವಿಗೀಡಾಗಿದ್ದಾರೆ.

ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ಬುಧವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್ ಪತನವಾಗಿತ್ತು.

ಸೇನಾ ಹೆಲಿಕಾಪ್ಟರ್‌ನಲ್ಲಿ ಸೇನೆಯ ಐವರು ಹಿರಿಯ ಅಧಿಕಾರಿಗಳಸಹಿತ ಸೇನಾ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಸೇರಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ಕೂನೂರಿನ ಸೇನಾ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತೆರಳುತ್ತಿದ್ದರು.

ಈ ದುರಂತದಲ್ಲಿ ಬದುಕುಳಿದಿರುವ ಪೈಲಟ್ ವರುಣ್ ಸಿಂಗ್ ಅವರಿಗೆ 80ರಷ್ಟು ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
2015ರಲ್ಲಿ ಸಂಭವಿಸಿದ ನಾಗಾಲ್ಯಾಂಡ್‍ನ ದೀಮಾಪುರ್ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಸ್ವಲ್ಪದ್ರಲ್ಲೇ ಪ್ರಾಣಾಪಾಯದಿಂದ ಬಿಪಿನ್ ರಾವತ್ ಪಾರಾಗಿದ್ದರು. ಆಗ ಬಿಪಿನ್ ರಾವತ್ ಲೆಫ್ಟಿನೆಂಟ್ ಜನರಲ್ ಆಗಿದ್ದರು. ದಿಮಾಪುರದಿಂದ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಹೆಲಿಕಾಪ್ಟರ್ ಪತನಗೊಂಡಿತ್ತು. ಎಂಜಿನ್ ವೈಫಲ್ಯದಿಂದ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಪೈಲಟ್‍ಗಳು ಮತ್ತು ಕರ್ನಲ್ ಕೂಡ ಬದುಕುಳಿದಿದ್ದರು. ಆದರೆ ಇವತ್ತು ಸಂಭವಿಸಿದ ದುರಂತದಲ್ಲಿ ಬಿಪಿನ್ ರಾವತ್ ಸಾವನ್ನಪ್ಪಿದ್ದಾರೆ.

https://twitter.com/IAF_MCC/status/1468559352915054593?ref_src=twsrc%5Etfw%7Ctwcamp%5Etweetembed%7Ctwterm%5E1468559352915054593%7Ctwgr%5E%7Ctwcon%5Es1_c10&ref_url=https%3A%2F%2Fapisv1.publictv.in%2Fnews%2Fget_html_page_by_id%2F284213

ಮತ್ತಷ್ಟು ಸುದ್ದಿಗಳು

Latest News

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ...

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

newsics.com ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್...

ನಾಳೆ ಮಧ್ಯಾಹ್ನ 12:30ಕ್ಕೆ SSLC ರಿಸಲ್ಟ್

newsics.com ಬೆಂಗಳೂರು: ಗುರುವಾರ (ಮೇ 19) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕುರಿತಂತೆ ಟ್ವೀಟ್ ಮಾಡಿದ್ದಾರೆ. 'ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1...
- Advertisement -
error: Content is protected !!