Tuesday, August 9, 2022

ಉದಯಪುರ ಹತ್ಯೆ, ಪ್ರಧಾನಿಗೂ ಜೀವ ಬೆದರಿಕೆ, ತಿಂಗಳ‌ ಕಾಲ ನಿಷೇಧಾಜ್ಞೆ, ಎನ್ಐಎ ತಂಡ ಆಗಮನ

Follow Us

newsics.com

ನವದೆಹಲಿ/ಉದಯಪುರ: ನೂಪುರ್ ಶರ್ಮಾ ಪರ ಮಾತನಾಡಿದ್ದಕ್ಕಾಗಿ ರಾಜಸ್ಥಾನದಲ್ಲಿ ವ್ಯಕ್ತಿಯ ಶಿರಚ್ಚೇದನ ಮಾಡಿ, ಪ್ರಧಾನಿಗೆ ಜೀವ ಬೆದರಿಕೆ ಹಾಕಿದ ಘಟನೆ ದೇಶವನ್ನೇ ಆತಂಕಕ್ಕೀಡುಮಾಡಿದೆ.

ರಾಜಸ್ಥಾನದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಒಂದು ತಿಂಗಳವರೆಗೂ 144 ಸೆಕ್ಷನ್ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ರಾಷ್ಟ್ರೀಯ ತನಿಖಾ ದಳ(ಎನ್ಐಎ)

ರಾಜಸ್ಥಾನದ ಉದಯಪುರಕ್ಕೆ ಆಗಮಿಸಿದೆ.

ಎನ್‌ಐಎ ತಂಡ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿಯ ನೇತೃತ್ವದ ತಂಡ ಈಗಾಗಲೇ ಉದಯಪುರದಲ್ಲಿ ಕಾರ್ಯಾಚರಣೆ ಆರಂಭಿಸಿದೆ.

ಉದಯಪುರದಲ್ಲಿ ಮಂಗಳವಾರ ಹಾಡಹಗಲೇ ನಡೆದ ವ್ಯಕ್ತಿಯ ಬರ್ಬರ ಹತ್ಯೆಯಿಂದಾಗಿ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ ಮಾಡಿದೆ. 24 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸಿದೆ.

ರಾಜಸ್ಥಾನದ ಮುಖ್ಯ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದು, ಮುಂದಿನ 30 ದಿನಗಳ ಕಾಲ ರಾಜ್ಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಪೊಲೀಸ್ ಅಧಿಕಾರಿಗಳ ರಜೆಯನ್ನು ರದ್ದುಗೊಳಿಸಲಾಗಿದೆ.

ರಾಜ್ಯದಲ್ಲಿ ಹೆಚ್ಚಿದ‌ ಕೊರೋನಾ, 968 ಮಂದಿಗೆ ಸೋಂಕು, ಓರ್ವ ಸಾವು

ನೂಪುರ್ ಶರ್ಮಾ ಹೇಳಿಕೆಗೆ ಬೆಂಬಲ ಆರೋಪ: ಯುವಕನ ಬರ್ಬರ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

newsics.com ನವದೆಹಲಿ: ಚೀನಾ ಕಂಪನಿಗಳ 12,000 ರೂ.ಗಳಿಗಿಂತ (150 ಡಾಲರ್) ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಮಾರಾಟ ನಿರ್ಬಂಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕುಗ್ಗುತ್ತಿರುವ ದೇಶೀಯ ಮೊಬೈಲ್ ಉದ್ಯಮ...

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ ಈ ಘಟನೆ ಮಧ್ಯಪ್ರದೇಶದ...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...
- Advertisement -
error: Content is protected !!