ಬೆಂಗಳೂರು: ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಶನಿವಾರ ಎತ್ತಂಗಡಿ ಮಾಡಿದೆ.
ನಗರದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೆ ಈ ವರ್ಗಾವಣೆ ನಡೆದಿದ್ದು, ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿದ್ದ, ಪ್ರಸ್ತುತ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಬಿಬಿಎಎಂಪಿ ಆಯುಕ್ತ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಅನಿಲ್ ಕುಮಾರ್ ಅವರನ್ನು ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಹುದ್ದೆ ವಹಿಸಿಕೊಂಡಿದ್ದ ವಿ. ರಶ್ಮಿ ಮಹೇಶ್ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಬಿಬಿಎಂಪಿ ಆಯುಕ್ತ ಅನಿಲ್’ಕುಮಾರ್ ಎತ್ತಂಗಡಿ
Follow Us