Wednesday, October 5, 2022

ನ.17ರಿಂದ ಕಾಲೇಜು ತರಗತಿ ಆರಂಭ; ಸರ್ಕಾರದಿಂದ ಎಸ್ಓಪಿ ಪ್ರಕಟ

Follow Us

newsics.com
ಬೆಂಗಳೂರು: ಯುಜಿಸಿ ನಿರ್ದೇಶನದಂತೆ ರಾಜ್ಯದಲ್ಲಿ ನವೆಂಬರ್ 17ರಿಂದ ಕಾಲೇಜು ತರಗತಿಗಳು ಪ್ರಾರಂಭವಾಗಲಿದೆ.
ತರಗತಿಗಳು ಮತ್ತು ಪರೀಕ್ಷೆಗಳನ್ನು ನಡೆಸುವ ವೇಳೆ ಕೊರೋನಾ ವೈರಸ್ ಸೋಂಕು ಹರಡದಂತೆ ತಡೆಯಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಯುಜಿಸಿ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲು ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಒಪಿ) ಬಿಡುಗಡೆ ಮಾಡಿದೆ.
ವಿದ್ಯಾರ್ಥಿಗಳು ಭೌತಿಕ ತರಗತಿಗೆ ಹಾಜರಾಗಲು ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಮಾಡಿದ ಒಪ್ಪಿಗೆ ಪತ್ರ ತರಬೇಕು. ತರಗತಿಗಳನ್ನು ನಡೆಸುವಾಗ ವಿದ್ಯಾರ್ಥಿಗಳ ಸಂಖ್ಯೆ, ತರಗತಿ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ದೈಹಿಕ ಅಂತರ ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿ ನಡೆಸಲು ಅನುಕೂಲವಾಗುವಂತೆ ವೇಳಾಪಟ್ಟಿಯನ್ನು ಕಾಲೇಜು ಹಂತದಲ್ಲಿ ಸಿದ್ಧಪಡಿಸಬೇಕು. ಬೋಧನಾ, ಪ್ರಯೋಗಾಲಯ ಮತ್ತು ಪ್ರಾಜೆಕ್ಟ್ ತರಗತಿಗಳನ್ನು ಅವಶ್ಯಕತೆ ಇದ್ದಲ್ಲಿ ಪಾಳಿ ವ್ಯವಸ್ಥೆಯಂತೆ ನಡೆಸಬೇಕು.
ಆನ್‌ಲೈನ್ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಮಾನ ಮತ್ತು ಸಮಸ್ಯೆ ಬಗೆಹರಿಸಲು ಭೌತಿಕ ಸಂಪರ್ಕ ತರಗತಿಗಳನ್ನು ನಡೆಸಬೇಕು. ಎಲ್ಲ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಕನಿಷ್ಠ ಒಂದು ತಿಂಗಳ ಅಧ್ಯಯನ ಸಾಮಗ್ರಿಗಳನ್ನು ಪ್ರತಿ ಅವಧಿಗೆ ಸಂಬಂಧಿಸಿದಂತೆ ತಯಾರಿಸಿ ವಾಟ್ಸಾಪ್, ಟೆಲಿಗ್ರಾಂ, ಇಮೇಲ್ ಮೂಲಕ ಕಡ್ಡಾಯವಾಗಿ ನೀಡಬೇಕು. ಅಧ್ಯಯನ ಸಾಮಗ್ರಿಗಳನ್ನು ವಿಡಿಯೋ, ಪವರ್ ಪಾಯಿಂಟ್, ಇ-ನೋಟ್ಸ್, ಆಡಿಯೋ ಬುಕ್ಸ್ ಮುಂತಾದವುಗಳ ರೂಪದಲ್ಲಿ ಕಾಲೇಜ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು.
ಸ್ನಾತಕೋತ್ತರ ಮತ್ತು ಅಂತಿಮ ವರ್ಷ ಹೊರತುಪಡಿಸಿ ಇತರೆ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸಬೇಕು. ಕಾಲೇಜಿನ ಸಂಪೂರ್ಣ ಕಟ್ಟಡ, ಮುಖ್ಯದ್ವಾರ, ಶೌಚಾಲಯ ಮತ್ತು ಎಲ್ಲ ಕೊಠಡಿಗಳಲ್ಲಿನ ಪೀಠೋಪಕರಣ ಮತ್ತು ಪಠ್ಯಸಾಮಗ್ರಿಗಳನ್ನು ಸ್ಯಾನಿಟೈಸ್ ಮಾಡಿಸಬೇಕು. ಬೋಧಕರು, ವಿದ್ಯಾರ್ಥಿಗಳು ಮತ್ತು ಇತರೆ ಸಿಬ್ಬಂದಿ ಕಡ್ಡಾಯವಾಗಿ ಮೂರು ದಿನ ಮುಂದೆ ಆರ್‌ಟಿಪಿಸಿಆರ್ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ಇದ್ದರೆ ಮಾತ್ರ ಹಾಜರಾಗಬೇಕು.
ಎಲ್ಲ ಕಾಲೇಜುಗಳು ತಮ್ಮ ಸಮೀಪದ ಆರೋಗ್ಯ ಕೇಂದ್ರಗಳೊಂದಿಗೆ ಮ್ಯಾಪಿಂಗ್ ಮಾಡಬೇಕು. ಪ್ರತಿ ತರಗತಿಯಿಂದ ಒಬ್ಬ ವಿದ್ಯಾರ್ಥಿಯನ್ನು ಗುರುತಿಸಿ ಆತನಿಂದ ತನ್ನ ಸಹಪಾಠಿಗಳಲ್ಲಿ ಕೋವಿಡ್ ಲಕ್ಷಣ ಕಂಡರೆ ಅದನ್ನು ಕೋವಿಡ್ ಕಾರ್ಯಪಡೆ ಘಟಕದ ಗಮನಕ್ಕೆ ತರುವಂತೆ ಸೂಚಿಸಬೇಕು.
* ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಊಟ ಮತ್ತು ಕುಡಿಯುವ ನೀರು ತರಬೇಕು. ಗ್ರಂಥಾಲಯ ಮತ್ತು ಕ್ಯಾಂಟೀನ್ ತೆರೆಯುವಂತಿಲ್ಲ. ಸಾಂಸ್ಕೃತಿಕ ಕಾರ್ಯಕ್ರಮಗಳು, ಎನ್‌ಸಿಸಿ, ಎನ್‌ಎಸ್‌ಎಸ್ ಚಟುವಟಿಕೆ ಶುರು ಮಾಡುವಂತಿಲ್ಲ. ಕಾಲೇಜಿನಲ್ಲಿ ಪ್ರತ್ಯೇಕ ಕೊಠಡಿ ಮೀಸಲಿಟ್ಟು ಅದರಲ್ಲಿ ಕೋವಿಡ್ ಪ್ರಥಮ ಚಿಕಿತ್ಸೆಗಾಗಿ ಕೋವಿಡ್ ಕಿಟ್‌ಗಳನ್ನು ಹಾಗೂ ಪಲ್ಸ್ ಆಕ್ಸಿ ಮೀಟರ್‌ಗಳನ್ನು ಒದಗಿಸಬೇಕು. ಕೊರೊನಾ ವೈರಸ್ ನಿಯಂತ್ರಣಕ್ಕೆ ಮಾಸ್ಕ್, ದೈಹಿಕ ಅಂತರ ಸೇರಿದಂತೆ ಸರ್ಕಾರ ಹೊರಡಿಸಿರುವ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಎಸ್ಓಪಿ ಹೇಳಿದೆ.

3ನೇ ಹಂತದ ಲಸಿಕೆ ಪ್ರಯೋಗ ಶೇ .90ರಷ್ಟು ಯಶಸ್ವಿಯಾಗಿದೆ- ಫಿಜರ್ ಸಂಸ್ಥೆ

ಪ್ರಿ ವೆಡ್ಡಿಂಗ್ ಫೋಟೊಶೂಟ್; ತೆಪ್ಪ ಮುಳುಗಿ ವಧು, ವರ ಸಾವು

ಕೆಂಪು ಬಣ್ಣಕ್ಕೆ ತಿರುಗಿದ ನದಿ ನೀರು: ಆತಂಕಗೊಂಡ ಜನರು

ನಟಿ ದೀಪಿಕಾ ಕಾಮಯ್ಯ ಇನ್ಸ್ಟಾಗ್ರಾಂ ಅಕೌಂಟ್ ಹ್ಯಾಕ್

ಶತಮಾನಗಳ ಹಿಂದಿನ ಸೈನಿಕನ ಸಂದೇಶ ಪತ್ರ ಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!