Sunday, December 5, 2021

ಮಂತ್ರಿಗಳೇ ಹುಷಾರಾಗಿರಿ, ಕ್ವಾರಂಟೈನ್ ಸ್ಥಿತಿ ತಂದುಕೊಳ್ಳದಿರಿ- ಬಿಎಸ್ ವೈ ಸಲಹೆ

Follow Us

♦ ಡಿಸಿಎಂ ಸೇರಿ ಐವರು ಸಚಿವರ ಕ್ವಾರಂಟೈನ್ ವರದಿ ಪ್ರಕಟಿಸಿದ್ದ newsics.com

ಬೆಂಗಳೂರು: ಈಗಾಗಲೇ ನಾಲ್ವರು ಸಚಿವರು ಹೋಂ ಕ್ವಾರಂಟೈನ್ ನಲ್ಲಿದ್ದು, ಹುಷಾರಾಗಿರುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಲ್ಲ ಸಚಿವರಿಗೆ ಸಲಹೆ ನೀಡಿದ್ದಾರೆ.
ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ನೀವು ಜನರಿಗೆ ಮಾದರಿ ಆಗಬೇಕು ಎಂದು ಸಚಿವ ಸಂಪುಟ ಸಭೆ ಆರಂಭದಲ್ಲೇ ಯಡಿಯೂರಪ್ಪ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಕೊರೋನಾ ಸೋಂಕಿತ ಕನ್ನಡ ಸುದ್ದಿ ವಾಹಿನಿಯ ಕ್ಯಾಮೆರಾಮನ್‍ ಸಂಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಡಿಸಿಎಂ ಅಶ್ವಥ್ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಸುಧಾಕರ್, ಸೋಮಣ್ಣ ಹಾಗೂ ಸಿ.ಟಿ.ರವಿ ಹೋಮ್ ಕ್ವಾರಂಟೈನ್ ನಲ್ಲಿರುವುದರಿಂದ ಸಂಪುಟ ಸಭೆಗೆ ಗೈರಾಗಿದ್ದರು.
ಡಿಸಿಎಂ ಸೇರಿ ಐವರು ಸಚಿವರು ಕ್ವಾರಂಟೈನ್ ಆಗಿರುವ ಬಗ್ಗೆ newsics.com ಬುಧವಾರ (ಏಪ್ರಿಲ್ 29) ಎಕ್ಸ್ಕ್ಲೂಸಿವ್ ವರದಿ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!