Thursday, December 9, 2021

ಮೇ 3 ರಂದು ಭಾರತೀಯ ಸೇನೆಯಿಂದ ಕೊರೋನಾ ವಾರಿಯರ್ಸ್ ಮೇಲೆ ಹೂಮಳೆ

Follow Us

ನವದೆಹಲಿ: ಕೊರೋನಾ ವಾರಿಯರ್ಸ್ ಗಳಿಗೆ ಗೌರವ ಸಲ್ಲಿಸಲು ಭಾರತೀಯ ಸೇನೆ ಮುಂದಾಗಿದೆ.
ಇದೇ ಭಾನುವಾರ (ಮೇ 3) ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕೊರೋನಾ ವಾರಿಯರ್ಸ್ ಕೇಂದ್ರಗಳ ಮೇಲೆ ಹೆಲಿಕಾಪ್ಟರ್ ಮೂಲಕ ಹೂಮಳೆ ಸುರಿಸುವ ಮೂಲಕ ಗೌರವ ಸಲ್ಲಿಸಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಕ್ಷಣಾ ಮುಖ್ಯಸ್ಥ ಬಿಪಿನ್ ರಾವತ್, ಆಯಾ ಸೇನಾ ನೆಲೆಗಳಲ್ಲಿರುವ ಹೆಲಿಕಾಪ್ಟರ್ ಮೂಲಕ ಪ್ರತಿ ಜಿಲ್ಲೆಗಳಲ್ಲಿನ ಕೊರೋನಾ ಚಿಕಿತ್ಸೆ ನೀಡತ್ತಿರುವ ಆಸ್ಪತ್ರೆಗಳ ಮೇಲೆ ಹಾಗೂ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿ ಮೇಲೆ ಭಾರತೀಯ ಸೇನೆ ಆಗಸದಿಂದ ಹೂಮಳೆ ಸುರಿಸಲಿದೆ.
ಕೊರೋನಾ ವೈರಸ್ ಮಟ್ಟಹಾಕಲು ದಿಟ್ಟ ಹೋರಾಟ ಮಾಡುತ್ತಿರುವ ವೈದ್ಯರು, ಸ್ಯಾನಿಟೈಸೇಶನ್ ಮಾಡುತ್ತಿರುವ ನೌಕರರು, ಮಾಧ್ಯಮ ವರ್ಗದವರು, ಪೊಲೀಸರಿಗೆ ಗೌರವ ಸಲ್ಲಿಸಲಾಗುತ್ತದೆ.
ಶ್ರೀನಗರದಿಂದ ತಿರುವನಂತಪುರದವರೆಗೆ ಸೇನೆ ಫ್ಪೈ ಪಾಸ್ಟ್ ನಡೆಸಲಿದ್ದು, ಈ ವೇಳೆ ಆಸ್ಪತ್ರೆಗಳ ಮೇಲೆ ಹೂಮಳೆ ಸುರಿಸಿ ಕೊರೋನಾ ವಾರಿಯರ್ಸ್ ಗಳಿಗೆ ಗೌರವ ಸಲ್ಲಿಸಲಾಗುವುದು. ಇದೇ ರೀತಿ ಅಸ್ಸಾಂನ ದಿಬ್ರುಗರ್ಹ್ ಮತ್ತು ಗುಜರಾತ್ ರಾಜ್ಯದ ಕಚ್ ನಲ್ಲಿಯೂ ಗೌರವ ಸಲ್ಲಿಸಲಾಗುತ್ತದೆ. ನೌಕಾಪಡೆ ಕೂಡ ಮೇ 3ರಂದು ಕರಾವಳಿ ಪ್ರದೇಶಗಳಲ್ಲಿ ಯುದ್ಧನೌಕೆಗಳನ್ನು ನಿಯೋಜನೆಗೊಳಿಸಿ ಗೌರವ ಸಲ್ಲಿಸಲಿದೆ ಎಂದು ರಾವತ್ ತಿಳಿಸಿದರು.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!