ಮುಂಬೈ: ಮಹಾರಾಷ್ಟ್ರದ ಮುಂಬೈ ಸಮೀಪದ ಭಿವಂಡಿಯಲ್ಲಿ ಕಟ್ಟಡ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 20 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ ಕನಿಷ್ಟ 20 ಮಂದಿ ಕಟ್ಟಡದ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಅಂದಾಜಿಸಲಾಗಿದೆ. ಇದರಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಭಿವಂಡಿಯ ಪಟೇಲ್ ಕಂಪೌಂಡ್ ನಲ್ಲಿ ಇರುವ ಈ ಕಟ್ಟಡ ಶಿಥಿಲಗೊಂಡಿತ್ತು ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ