Monday, April 12, 2021

ಸಿಎ ಪರೀಕ್ಷೆ ರದ್ದು, ನವೆಂಬರ್’ನಲ್ಲಿ ಸಾಧ್ಯತೆ

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಚಾರ್ಟರ್ಡ್ ಅಕೌಂಟೆಂಟ್ಸ್ ಪರೀಕ್ಷೆ ರದ್ದುಮಾಡಿರುವ ಬಗ್ಗೆ ಐಸಿಎಐ ನ ಅಧಿಕೃತ ಪ್ರಕಟಣೆ ತಿಳಿಸಿದೆ.
ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆ ಮೇ/ಜುಲೈನಲ್ಲಿ ನಡೆಯಬೇಕಿತ್ತು. ಈ ಮೊದಲು ಸಿಎ ಪರೀಕ್ಷೆಯನ್ನು ಮೇ ತಿಂಗಳಲ್ಲಿ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಕೊರೋನಾ ಲಾಕ್ಡೌನ್ ಕಾರಣದಿಂದ ಜುಲೈಗೆ ಮುಂದೂಡಲಾಗಿತ್ತು. ಜುಲೈ 29 ರಿಂದ ಆಗಸ್ಟ್ 16 ರ ನಡುವೆ ಪರೀಕ್ಷೆ ನಡೆಸಲು ಯೋಜನೆ ನಡೆಸಲಾಗಿತ್ತು. ಆದರೆ, ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಮೇ 2020ರ ಸಿಎ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಐಸಿಎಐ ಹೇಳಿದೆ.
ಮೇನಲ್ಲಿ ನಡೆಯಬೇಕಿದ್ದ ಪರೀಕ್ಷೆಯನ್ನು ನವೆಂಬರ್ ನಲ್ಲಿ ನಡೆಯುವ ಪರೀಕ್ಷೆಯ ಜತೆಗೇ ನಡೆಸಲಾಗುವುದು. ಪರೀಕ್ಷೆಗೆ ಪಾವತಿಸಿದ ಶುಲ್ಕ ಮತ್ತು ವಿನಾಯಿತಿಗಳು ಮುಂದುವರೆಯಲಿವೆ. ಮೇ ತಿಂಗಳಲ್ಲಿ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ನವಂಬರ್ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ ಪರೀಕ್ಷಾ ಕೇಂದ್ರ ಬದಲಾಯಿಸುವ ಆಯ್ಕೆಯನ್ನು ನೀಡಲಾಗುವುದು. ಷರತ್ತುಗಳಿಗೆ ಒಳಪಟ್ಟು ನವಂಬರ್ 1ರಿಂದ ಪರೀಕ್ಷೆಯನ್ನು ಆರಂಭಿಸುವ ಚಿಂತನೆ ಇದೆ ಎಂದು ಹೇಳಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!