Saturday, June 10, 2023

ಮೇ 27ರಂದು‌‌ ಸಂಪುಟ ವಿಸ್ತರಣೆ: ಸಂಭಾವ್ಯ ಸಚಿವರ ಪಟ್ಟಿ ವೈರಲ್

Follow Us

newsics.com

ನವದೆಹಲಿ/ ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಒಮ್ಮತದ ನಿರ್ಧಾರ ಬಾರದ ಹಿನ್ನೆಲೆಯಲ್ಲಿ ಸಚಿವರ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ.

ಹೈಕಮಾಂಡ್ ಜತೆಗೆ ಸರಣಿ ಸಭೆ, ಚರ್ಚೆಗಳ ಬಳಿಕ ಪ್ರಮಾಣವಚನ ಕಾರ್ಯಕ್ರಮವನ್ನು ಮೇ 27ರಂದು ನಡೆಸಲು‌ ಸರ್ಕಾರ ನಿರ್ಧರಿಸಿದ್ದು ಸಚಿವರ ಪಟ್ಟಿಯೂ ಅಂತಿಮಗೊಂಡಿದೆ ಎನ್ನಲಾಗುತ್ತಿದೆ.

ಈ‌ ಮಧ್ಯೆ ಸಂಭಾವ್ಯ ಸಚಿವರ ಪಟ್ಟಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಪಟ್ಟಿಯ ಪ್ರಕಾರ, ಹೆಚ್‌.ಕೆ.ಪಾಟೀಲ್‌, ಮಂಕಾಳ ವೈದ್ಯ, ಶಿವಾನಂದ ಪಾಟೀಲ್‌, ಭೈರತಿ ಸುರೇಶ್‌, ಕೃಷ್ಣ ಭೈರೇಗೌಡ, ಡಾ.ಶರಣಪ್ರಕಾಶ್‌ ಪಾಟೀಲ್, ಶರಣಬಸಪ್ಪ ದರ್ಶನಾಪುರ, ರಹೀಂ ಖಾನ್‌, ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್‌, ಲಕ್ಷ್ಮಣ ಸವದಿ, ಕೆ.ವೆಂಕಟೇಶ್‌, ಮಧು ಬಂಗಾರಪ್ಪ, ಸಂತೋಷ್ ಲಾಡ್‌, ವಿನಯ್ ಕುಲಕರ್ಣಿ, ವಿಧಾನಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಅವರಿಗೆ ಸಚಿವ ಸ್ಥಾನ ಒಲಿದುಬಂದಿದೆ. ಇನ್ನು, ವಿಧಾನಸಭೆ ಉಪಸಭಾಪತಿ ಸ್ಥಾನ ಚಿಂತಾಮಣಿ ಶಾಸಕ ಎಂ.ಸಿ.ಸುಧಾಕರ್‌ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ.

ಹಿರಿಯ ಶಾಸಕರಾದ ಆರ್‌ವಿ ದೇಶಪಾಂಡೆ ಹಾಗೂ ಬಿಕೆ ಹರಿಪ್ರಸಾದ್‌ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಬಿ.ಕೆ.ಹರಿಪ್ರಸಾದ್‌ ಬದಲು ಎಂಎಲ್‌ಸಿ ಬೋಸರಾಜು ಅವರಿಗೆ ಸಚಿವ ಸ್ಥಾನ ಒಲಿದುಬಂದಿದೆ. ಆರ್‌.ವಿ.ದೇಶಪಾಂಡೆ ಸೇರಿ ಹಲವು ಹಿರಿಯರ ಸೇರ್ಪಡೆಗೆ ಡಿಕೆ ಶಿವಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಮಧು ಬಂಗಾರಪ್ಪ, ಬಿ.ಕೆ.ಹರಿಪ್ರಸಾದ್‌ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಆದರೆ ಒಂದೇ ಸಮುದಾಯದ ಮಧು, ಹರಿಪ್ರಸಾದ್ ಸೇರ್ಪಡೆಗೆ ಸಿದ್ದರಾಮಯ್ಯ ಅವರು ಅಸಮ್ಮತಿ ಸೂಚಿಸಿದ್ದಾರೆ. ಸದ್ಯ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ದಕ್ಕಿದ್ದು, ಹರಿಪ್ರಸಾದ್ ಅವರಿಗೆ ಮಂತ್ರಿ ಸ್ಥಾನ ಕೈತಪ್ಪಿದೆ ಎನ್ನಲಾಗಿದೆ.

ಬೆತ್ತಲೆ ವಿಡಿಯೋ ಮಾಡಿದ ಯುವತಿ ಬ್ಲ್ಯಾಕ್‌ಮೇಲ್: 23‌ ಲಕ್ಷ ಕಳೆದುಕೊಂಡ ಬೆಂಗಳೂರು‌ ಉದ್ಯೋಗಿ

ಬೆಂಗಳೂರಲ್ಲಿ ಕಾಂಗ್ರೆಸ್ ಕಾರ್ಯಕರ್ತನ‌ ಬರ್ಬರ ಹತ್ಯೆ

2ನೇ ಮದುವೆಯಾದ ನಟ ಆಶಿಶ್ ವಿದ್ಯಾರ್ಥಿ

ಮತ್ತಷ್ಟು ಸುದ್ದಿಗಳು

vertical

Latest News

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ.

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
- Advertisement -
error: Content is protected !!