Tuesday, April 13, 2021

ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು; ಸೆಕೆಂಡ್ ಪಿಯುಸಿಗೆ ಬಡ್ತಿ

♦ ಇಂದು ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು: ಜುಲೈ 16 ರಿಂದ 27ರವರೆಗೆ ನಿಗದಿಯಾಗಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಸುಮಾರು 60 ಸಾವಿರ ವಿದ್ಯಾರ್ಥಿಗಳು ಸಪ್ಲಿಮೆಂಟರಿ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕಾಗಿತ್ತು. ಆಯಾ ಕಾಲೇಜುಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಟ್ಟು ಜುಲೈ 30 ರಂದು ಫಲಿತಾಂಶವನ್ನು ಪ್ರಕಟಿಸಲು ನಿರ್ಧರಿಸಲಾಗಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಪಡಿಸಲಾಗಿದೆ. ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳ ಪರೀಕ್ಷೆಯನ್ನು ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ತೇರ್ಗಡೆಗೊಳಿಸಲಾಗುವುದು. ಆದರೆ, ಹಾಜರಾತಿಯ ಕೊರತೆಯಿಂದ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ಪಡೆಯದ ವಿದ್ಯಾರ್ಥಿಗಳು ಮಾತ್ರ ಅನುತ್ತೀರ್ಣಗೊಳ್ಳುವರು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಇಂದು (ಜುಲೈ 14) ದ್ವಿತೀಯ ಪಿಯುಸಿ ಫಲಿತಾಂಶ: 
ಈ ಮಧ್ಯೆ, ಮಂಗಳವಾರ (ಜುಲೈ 14) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ಸುರೇಶ ಕುಮಾರ್ ಹೇಳಿದ್ದಾರೆ. ಕಳೆದ ಶನಿವಾರ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜುಲೈ 18ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ಹೇಳಿದ್ದರು. ಆದರೆ, ಲಾಕ್ ಡೌನ್ ಹಿನ್ನೆಲೆಯಲ್ಲಿ ನಾಲ್ಕು ದಿನ ಮೊದಲೇ ಫಲಿತಾಂಶ ಪ್ರಕಟಿಸುತ್ತಿರುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!