Saturday, April 17, 2021

5ನೇ ತರಗತಿವರೆಗಿನ ಆನ್’ಲೈನ್ ಶಿಕ್ಷಣ ರದ್ದು

ಬೆಂಗಳೂರು: ಎಲ್ಕೆಜಿ, ಯುಕೆಜಿ ಸೇರಿ ಪ್ರಾಥಮಿಕ ಹಂತದಲ್ಲಿ ಅಂದರೆ ಐದನೇ ತರಗತಿವರೆಗಿನ ಆನ್’ಲೈನ್ ಶಿಕ್ಷಣವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ನಿಷೇಧಿಸಿದೆ.
ಈ ತರಗತಿಗಳಿಗೆ ನಡೆಯುತ್ತಿರುವ ಆನ್’ಲೈನ್ ಶಿಕ್ಷಣ ತಕ್ಷಣ ನಿಲ್ಲಿಸಬೇಕು, ಈ ಕ್ಲಾಸ್’ಗಳಿಗೆ ಪಡೆಯುತ್ತಿರುವ ಶುಲ್ಕವನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ಸಚಿವ ಸುರೇಶಕುಮಾರ್ ಹೇಳಿದರು.
ಆನ್’ಲೈನ್ ಕಲಿಕೆ ತರಗತಿ ಶಿಕ್ಷಣಕ್ಕೆ‌ ಪರ್ಯಾಯ ಅಲ್ಲ. ಆದರೂ ಎಲ್ಕೆಜಿ, ಯುಕೆಜಿ ಮಕ್ಕಳಿಗೂ ಆನ್ಲೈನ್ ಶಿಕ್ಷಣ ನೀಡುತ್ತಿರುವುದು ವಿಪರ್ಯಾಸ ಎಂದು ಹೇಳಿದರು.
ಆನ್’ಲೈನ್ ಶಿಕ್ಷಣದ ಸಾಧಕ ಬಾಧಕ ಕುರಿತು ಬುಧವಾರ ನಡೆದ ವಿಸ್ತೃತ ಸಭೆಯಲ್ಲಿ ರಾಷ್ರೀಯ ಶಿಕ್ಷಣ ನೀತಿ ನಿರೂಪಕ ಡಾ.ಎಂ.ಕೆ. ಶ್ರೀಧರ್, ಶಿಕ್ಷಣ ತಜ್ಞ ಗುರುರಾಜ ಕರ್ಜಗಿ, ಅಜೀಂ ಪ್ರೇಂಜಿ ವಿವಿಯ ಹೃಷಿಕೇಶ್, ಡಾ.ನಿರಂಜನಾರಾಧ್ಯ, ಡಾ.ವಿಜಯಸಾಗರ್ ಸೇರಿ ಹನ್ನೊಂದು ಮಂದಿ ಹಾಜರಿದ್ದರು.
ಜೂನ್ 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ:
ಜೂನ್ 25ರಿಂದ ಜುಲೈ 4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪುನರುಚ್ಚರಿಸಿದರು. ಕೊರೋನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತರಕ್ಷಣೆಗೆ ಪ್ರಮುಖ ಆದ್ಯತೆ ನೀಡಲಾಗುವುದು. ಪರೀಕ್ಷೆ ಬರೆಯಲಿರುವ ಎಲ್ಲ 8.5 ಲಕ್ಷ ವಿದ್ಯಾರ್ಥಿಗಳಿಗೆ ತಲಾ ಎರಡರಿಂದ ಮೂರು ಮಾಸ್ಕ್ ನೀಡಲಾಗುವುದು. ಅನಾರೋಗ್ಯಪೀಡಿತ ಮಕ್ಕಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಉಅವ್ಯಾವ ವಿದ್ಯಾರ್ಥಿಗಳು ಪರೀಕ್ಷಾ ಹಾಲ್ ಗೆ ಹೇಗೆ ಬರುತ್ತಾರೆಂಬುದನ್ನು ತಿಳಿಯಲಾಗಿದ್ದು, ಆ ಪ್ರಕಾರ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಇಲಾಖೆ, ಗೃಹ ಇಲಾಖೆ, ಸಾರಿಗೆ ಇಲಾಖೆ ಕೈ ಜೋಡಿಸಲಿದೆ ಎಂದು ತಿಳಿಸಿದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!