ಶ್ರೀನಗರ: ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯ ಗುಲ್ ಪುರ ಎಂಬಲ್ಲಿ ಭಾರತದ ನಾಗರಿಕರನ್ನು ಗುರಿಯಾಗಿರಿಸಿ ಪಾಕಿಸ್ತಾನ ಗುಂಡಿನ ದಾಳಿ ನಡೆಸಿದೆ. ಪಾಕ್ ಶೆಲ್ ದಾಳಿಯಲ್ಲಿ ಭಾರತದ ಮೂವರು ನಾಗರಿಕರು ಮೃತಪಟ್ಟಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಗುಂಡಿನ ದಾಳಿಗೆ ಭಾರತದ ಸೇನಾಪಡೆ ಸೂಕ್ತ ಪ್ರತ್ಯುತ್ತರ ನೀಡಿದೆ. ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಸತತವಾಗಿ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಉಗ್ರರನ್ನು ಭಾರತಕ್ಕೆ ರವಾನಿಸಲು ಈ ತಂತ್ರದ ಮೊರೆ ಹೋಗಿದೆ ಎಂದು ವಿಶ್ಲೇಷಿಸಲಾಗಿದೆ.
ಇನ್ನೊಂದೆಡೆ ಇಂದು ಮುಂಜಾನೆ ಜಮ್ಮು ಕಾಶ್ಮೀರದ ಸೋಫಿಯಾನ್ ಸಮೀಪ ಉಗ್ರರ ವಿರುದ್ಧ ಭದ್ರತಾಪಡೆ ಕಾರ್ಯಾಚರಣೆ ಆರಂಭಿಸಿದೆ. ಅಮ್ಸಿ ಪೋರಾ ಎಂಬಲ್ಲಿ ಈ ಕಾರ್ಯಾಚರಣೆ ಮುಂದುವರಿದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ