newsics.com
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ ಆವರಣದಲ್ಲಿ ಡಿಆರ್‌ಡಿಓ ಸಂಶೋಧನಾ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ, ಶಿವಮೊಗ್ಗದಲ್ಲಿ ಡಿಆರ್‌ಡಿಓ ಸ್ವತಂತ್ರ ಪ್ರಯೋಗಾಲಯ ಸ್ಥಾಪನೆ ಮಾಡಬೇಕು ಎಂದು ಮನವಿ ಸಲ್ಲಿಸಿದರು. ಮನವಿಯಲ್ಲಿ ಯಡಿಯೂರಪ್ಪ ಅವರು, ಸಾಕಷ್ಟು ಸಂಖ್ಯೆಯ ತಂತ್ರಜ್ಞರು ಮತ್ತು ವಿಜ್ಞಾನಿಗಳ ತಂಡವನ್ನು ಹೊಂದಿರುವ ಪ್ರಯೋಗಾಲಯ ಸ್ಥಾಪನೆ ಆಗಬೇಕು ಎಂದು ಉಲ್ಲೇಖಿಸಿದ್ದಾರೆ.
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಿಲಿಟರಿ ಬಳಕೆಗಾಗಿ ನೈಸರ್ಗಿಕ ಪರಿಹಾರ ಕ್ರಮಗಳನ್ನು ಅನ್ವೇಷಣೆ ಮಾಡಬಹುದಾಗಿದೆ. ಪ್ರಯೋಗಾಲಯದ ನಿರ್ಮಾಣಕ್ಕೆ ಅಗತ್ಯವಾದ ಭೂಮಿ ಮುಂತಾದ ಮೂಲ ಸೌಕರ್ಯಗಳನ್ನು ರಾಜ್ಯ ಸರ್ಕಾರ ಒದಗಿಸಲಿದೆ ಎಂದು ಮನವಿಯಲ್ಲಿ ಬಿಎಸ್ ವೈ ವಿವರಿಸಿದ್ದಾರೆ.
ಕುವೆಂಪು ವಿವಿ ಆವರಣದಲ್ಲಿ ಡಿಆರ್‌ಡಿಓ ಸಂಶೋಧನಾ ಘಟಕ ಸ್ಥಾಪನೆಗೆ ಕೇಂದ್ರ ಒಪ್ಪಿಗೆ
Follow Us