newsics.com
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಎಲ್ಲ ವಿಧದ ಈರುಳ್ಳಿ ರಫ್ತಿನ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧ ಹೇರಿದೆ. ಈರುಳ್ಳಿ ಬೆಳೆಯುವ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ಕ ಮತ್ತು ಕರ್ನಾಟಕ ಇತ್ತೀಚೆಗೆ ಪ್ರವಾಹಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ವಿಶ್ಲೇಷಿಸಲಾಗಿದೆ.
ದೇಶದಲ್ಲಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗುವ ಸಾಧ್ಯತೆಯನ್ನು ಮಾರುಕಟ್ಟೆ ಅಧ್ಯಯನ ಸಮಿತಿ ಸೂಚಿಸಿತ್ತು. ದಸರಾ ಮತ್ತು ಇತರ ಹಬ್ಬಗಳು ಸದ್ಯದಲ್ಲಿ ಬರಲಿರುವ ಹಿನ್ನೆಲೆಯಲ್ಲಿ ಜನರು ಈರುಳ್ಳಿ ದರ ಹೆಚ್ಚಳದಿಂದ ತೊಂದರೆಗೆ ಸಿಲುಕುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.