newsics.com
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದೆ. ನಳಿನಿ ಸೇರಿದಂತೆ ಆರು ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಆದೇಶ ನೀಡಿತ್ತು.
ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ನಳಿನಿ ಈಗಾಗಲೇ ಜೈಲಿನಿಂದ ಹೊರ ಬಂದಿದ್ದಾರೆ. ಉಳಿದ ಆರೋಪಿಗಳನ್ನು ಪ್ರತ್ಯೇಕ ಸ್ಥಳದಲ್ಲಿ ಇರಿಸಲಾಗಿದೆ.
ನವೆಂಬರ್ 11ರಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಎಲ್ಲ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿತ್ತು. ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಕಾಂಗ್ರೆಸ್ ಕೂಡ ವಿರೋಧ ವ್ಯಕ್ತಪಡಿಸಿತ್ತು.
ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿತ್ತು. ಈ ವಿಚಾರದಲ್ಲಿ ಸೋನಿಯಾ ಗಾಂಧಿ ಅವರ ಅಭಿಪ್ರಾಯಗಳನ್ನು ಪಕ್ಷ ಗೌರವಿಸುತ್ತಿದೆ. ಆದರೂ ಅಪರಾಧಿಗಳ ಬಿಡುಗಡೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಜೈ ರಾಂ ರಮೇಶ್ ಹೇಳಿದ್ದರು.