ನವದೆಹಲಿ: ಶೇಕಡ 30ರಷ್ಟು ಹಾಜರಾತಿಯೊಂದಿಗೆ ಎಂಟನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಶಾಲೆ ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಒಂದರಿಂದ ಏಳನೇ ತರಗತಿಗಳ ಮಕ್ಕಳಿಗೆ ಸದ್ಯಕ್ಕೆ ಶಾಲೆ ನಡೆಸುವುದಿಲ್ಲ. ಶೇಕಡ 30ರಷ್ಟು ಹಾಜರಾತಿಯೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ನಿಯಮಾನುಸಾರ ಎಂಟನೇ ತರಗತಿ ಮೇಲ್ಪಟ್ಟ ಶಾಲೆ- ಕಾಲೇಜುಗಳನ್ನು ನಡೆಸಲು ಚಿಂತನೆ ನಡೆಸಲಾಗುವುದು. ಜುಲೈನಿಂದ ಹಸಿರು ಮತ್ತು ಕಿತ್ತಳೆ ವಲಯದಲ್ಲಿ ಮಾತ್ರ ಶಾಲೆ ಆರಂಭಿಸುವ ಚಿಂತನೆಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಮೂಲಗಳು ತಿಳಿಸಿವೆ.
ಈ ವಾರದ ಕೊನೆಯಲ್ಲಿ ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಅಧಿಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. 8ನೇ ತರಗತಿ ಮೇಲ್ಪಟ್ಟ ಶಾಲೆಗಳಿಗೆ ಶೇಕಡ 100 ರಷ್ಟು ವಿದ್ಯಾರ್ಥಿಗಳೊಂದಿಗೆ ಕಾರ್ಯನಿರ್ವಹಿಸಲು ಸಾಧ್ಯವಾದರೆ ಒಂದರಿಂದ ಏಳನೇ ತರಗತಿ ಮಕ್ಕಳಿಗೂ ಶಾಲೆಗಳನ್ನು ನಡೆಸಲು ಚಿಂತನೆ ಇದೆ ಎಂದು ಹೇಳಲಾಗಿದೆ.