Monday, November 29, 2021

CBSE 1ರಿಂದ 8ನೇ ತರಗತಿ ಮಕ್ಕಳನ್ನು ಪಾಸ್ ಮಾಡಲು ಕೇಂದ್ರ ಸೂಚನೆ

Follow Us

ನವದೆಹಲಿ: ಸಿಬಿಎಸ್​ಇ ಪಠ್ಯಕ್ರಮದ ಒಂದರಿಂದ ಎಂಟನೇ ತರಗತಿವರೆಗೆ ಎಲ್ಲರನ್ನೂ ಪಾಸ್ ಮಾಡುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಎಲ್ಲ ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಒಂಭತ್ತರಿಂದ ಹನ್ನೊಂದನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳನ್ನು ಪ್ರಾಜೆಕ್ಟ್, ಟೆಸ್ಟ್​ಗಳು, ಅವಧಿ ಪರೀಕ್ಷೆಗಳು ಸೇರಿದಂತೆ ನಿಯೋಜಿತ ಕಾರ್ಯಗಳ ಆಧಾರದ ಮೇಲೆ ಮುಂದಿನ ತರಗತಿಗೆ ಬಡ್ತಿ ನೀಡಬೇಕು ಎಂದೂ ಹೇಳಿದೆ.
ದೇಶದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಒಂದರಿಂದ ಎಂಟನೇ ತರಗತಿಯ ಎಲ್ಲ ಮಕ್ಕಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವಂತೆ ಸಿಬಿಎಸ್​ಇ ಆಡಳಿತ ಮಂಡಳಿಗೆ ಸಲಹೆ ನೀಡಲಾಗಿದೆ, ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್​ ಟ್ವೀಟ್ ಮಾಡಿದ್ದಾರೆ.
9ನೇ ತರಗತಿ ಮತ್ತು ಪ್ಲಸ್ ಒನ್ ತರಗತಿಯಲ್ಲಿ ಕಲಿಯುವ ವಿದ್ಯಾರ್ಥಿಗಳನ್ನು ಶಾಲೆಯಲ್ಲಿ ನೀಡಿದ ಪ್ರಾಜೆಕ್ಟ್, ಪರೀಕ್ಷೆ ಆಧಾರದ ಮೇಲೆ ಮುಂದಿನ ತರಗತಿಗೆ ಉತ್ತೀರ್ಣ ಮಾಡಬಹುದಾಗಿದೆ. ಉತ್ತೀರ್ಣರಾಗದೇ ಇರುವವರು ಆನ್‌ಲೈನ್ ಅಥವಾ ಆಫ್‌ಲೈನ್ ಪರೀಕ್ಷೆಗಳಿಗೆ ಹಾಜರಾಗಬಹುದಾಗಿದೆ ಎಂದು ಸಚಿವರು ಹೇಳಿದ್ದಾರೆ.
29 ವಿಷಯಗಳಿಗೆ ಮಾತ್ರ ಪರೀಕ್ಷೆ:
10 ಮತ್ತು 12ನೇ ತರಗತಿಯ ಮುಖ್ಯ ವಿಷಯಗಳಿಗೆ ಮಾತ್ರ ಸಿಬಿಎಸ್‌ಇ ಪರೀಕ್ಷೆ ನಡೆಸಲಿದೆ ಎಂದು ಸಚಿವರು ತಿಳಿಸಿದ್ದಾರೆ.
ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಅಗತ್ಯವಿರುವ ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಉಳಿದ ವಿಷಯಗಳಿಗೆ ಪರೀಕ್ಷೆ ನಡೆಸುವುದಿಲ್ಲ ಎಂದು ಸಿಬಿಎಸ್‌ಇ ಕಾರ್ಯದರ್ಶಿ ಅನುರಾಗ್‌ ತ್ರಿಪಾಠಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!