Sunday, December 5, 2021

ಮಸೀದಿ ಸಭೆಯಲ್ಲಿ ಭಾಗಿಯಾದವರ ಶೋಧಕ್ಕೆ ಕೇಂದ್ರ ಸೂಚನೆ

Follow Us

♦ ಹುಡುಕಿ ಕ್ವಾರಂಟೈನ್ ಮಾಡಿ ♦ ವಿದೇಶಿಗರನ್ನು ಗಡಿಪಾರು ಮಾಡಿ

ನವದೆಹಲಿ: ಇಲ್ಲಿನ ನಿಜಾಮುದ್ದೀನ್ ಮರ್ಕಜ್ ಮಸೀದಿ ಕಾರ್ಯಕ್ರಮದಲ್ಲಿ ಭಾಗಿಯಾಯಾಗಿದ್ದ 2000 ತಬ್ಲೀಕ್ ಇ ಜಮಾತ್ ಕಾರ್ಯಕರ್ತರನ್ನು ತಕ್ಷಣ ಹುಡುಕಿ ಕ್ವಾರಂಟೈನ್ ಮಾಡುವಂತೆ ಹಾಗೂ ವಿದೇಶಿಗರನ್ನು ಗಡಿಪಾರು ಮಾಡುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.
ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯ ಸರ್ಕಾರಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ. ಮಸೀದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದೇಶಿಗರಲ್ಲಿ ಕೊರೋನಾ ವೈರಸ್ ಪರೀಕ್ಷೆ ನೆಗೆಟಿವ್ ಇದ್ದರೂ ಅವರನ್ನು ದೇಶದಿಂದ ಗಡಿಪಾರು ಮಾಡಿ. ಲಭ್ಯವಿರುವ ವಿಮಾನದಲ್ಲಿ ತಕ್ಷಣ ಅವರನ್ನು ಅವರ ಸ್ವದೇಶಕ್ಕೆ ಕಳುಹಿಸಿ ಎಂದು ಸೂಚಿಸಿದೆ.
ಸುಮಾರು 70 ದೇಶಗಳಿಂದ 2000ಕ್ಕೂ ಅಧಿಕ ವಿದೇಶಿಗರು ಪಾಲ್ಗೊಂಡಿದ್ದರು. ಬಾಂಗ್ಲಾದೇಶದಿಂದ 493 ಮಂದಿ, ಇಂಡೋನೇಷ್ಯಾದಿಂದ 472, ಮಲೇಷ್ಯಾದಿಂದ 150, ಥೈಲ್ಯಾಂಡ್ ನಿಂದ 142 ಮಂದಿ ಪಾಲ್ಗೊಂಡಿದ್ದರು ಎನ್ನಲಾಗಿದೆ.
ಈ ಧಾರ್ಮಿಕ ಸಭೆಯಲ್ಲಿ ಭಾಗಿಯಾದ 24 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 700 ಮಂದಿಯನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದೆ. ಈ ಪೈಕಿ 335 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!