Tuesday, April 13, 2021

ಸಣ್ಣ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ಯೋಜನೆ ಘೋಷಣೆ

ನವದೆಹಲಿ: ದೇಶದ ಅರ್ಥವ್ಯವಸ್ಥೆಗೆ ಆರ್ಥಿಕ ಸಂಜೀವಿನಿ ನೀಡುವ ಅಂಗವಾಗಿ ಕೇಂದ್ರ ಸರ್ಕಾರ ಸಣ್ಣ ಕೈಗಾರಿಕೆಗಳಿಗೆ ಮೂರು ಲಕ್ಷ ಕೋಟಿ ರೂಪಾಯಿ ಸಾಲ ಯೋಜನೆಯನ್ನು ಘೋಷಿಸಿದೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಘೋಷಣೆ ಮಾಡಿದ್ದಾರೆ. ಇದರಿಂದ ಸುಮಾರು 45 ಲಕ್ಷ ಕೈಗಾರಿಕೆಗಳಿಗೆ ನೆರವಾಗಲಿದೆ. ಇದು ಉದ್ಯೋಗ ಖಾತರಿಪಡಿಸಲಿದೆ.  ಮರು ಪಾವತಿಗೆ ನಾಲ್ಕು  ವರ್ಷ ಅವಧಿ ನೀಡಲಾಗಿದೆ.  ಸಾಲ ಪಡೆದ ಮೊದಲ 12 ತಿಂಗಳು ಸಾಲ ಮರು ಪಾವತಿ ಮಾ಼ಡಬೇಕಾಗಿಲ್ಲ. ಈ ಸಾಲ ಪಡೆಯಲು ಯಾವುದೇ ಅಡಮಾನ ಸಲ್ಲಿಸಬೇಕಾಗಿಲ್ಲ. ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ನಿವಾರಿಸುವತ್ತ ಇದು ಮಹತ್ವದ ಪಾತ್ರ ನಿರ್ವಹಿಸಲಿದೆ. ತೆರಿಗೆದಾರರಿಗೂ ಖುಷಿ ಸುದ್ದಿ ನೀಡಿದ ಸಚಿವರು, 18 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ವಾಪಸ್ ನೀಡುವುದಾಗಿ ತಿಳಿಸಿದರು.
15 ಸಾವಿರ ರೂ. ಒಳಗಿನ ವೇತನದಾರರಿಗೆ ತಕ್ಷಣ ಇಪಿಎಫ್ ವಾಪಸ್ ನೀಡಲಾಗುವುದು. ಆಗಸ್ಟ್ ವರೆಗೆ ಇಪಿಎಫ್ ಹಣವನ್ನು ಸರ್ಕಾರವೇ ಪಾವತಿಸಲಿದೆ ಎಂದು ಸೀತಾರಾಮನ್ ಹೇಳಿದರು.
ಕೊರೋನಾ ಲಾಕ್ ಡೌನ್ ನಿಂದ ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟ ಹಿನ್ನೆಲೆಯಲ್ಲಿ ಸಮಾಜದ ವಿವಿಧ ವರ್ಗಗಳಿಗೆ ಮಂಗಳವಾರ (ಮೇ 12) ಪ್ರಧಾನಿ ಮೋದಿ ಅವರು 20 ಲಕ್ಷ ಕೋಟಿ ರೂಪಾಯಿಗಳ ಪರಿಹಾರ ಪ್ಯಾಕೇಜ್ ಘೋಷಿಸಿದ್ದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ಯಾಕೇಜ್ ವಿವರ ನೀಡಿದ ನಿರ್ಮಲಾ ಸೀತಾರಾಮನ್, ಈ ‘ಆರ್ಥಿಕ ಪ್ಯಾಕೇಜ್ ಸ್ವಾವಲಂಬಿ ಭಾರತವನ್ನು ನಿರ್ಮಿಸಲಿದೆ’ ಎಂದರು.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!