ಬೆಂಗಳೂರು: ಆಗಸ್ಟ್ 15 ರೊಳಗೆ ಕರ್ನಾಟಕ ಸಾಮಾನ್ಯ ಪರೀಕ್ಷೆಯ (KCET) ಫಲಿತಾಂಶ ಘೋಷಿಸಲಾಗುವುದು ಎಂದು ಡಿಸಿಎಂ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಕರ್ನಾಟಕ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 15ರೊಳಗೆ ಘೋಷಿಸಲಾಗುವುದು. ಇದರಿಂದ ಕಾಲೇಜುಗಳು ಸೆಪ್ಟೆಂಬರ್ ವೇಳೆಗೆ ಪ್ರವೇಶಕ್ಕೆ ತಯಾರಿ ನಡೆಸಲು ಅನುಕೂಲವಾಗುತ್ತದೆ ಎಂದು ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.
ಕೊರೋನಾ ಸೋಂಕು ಭೀತಿಯ ನಡುವೆಯೂ ನಡೆದ ಕೆಸಿಇಟಿಯ ಮೊದಲ ದಿನ 75.89 ರಷ್ಟು ಜೀವಶಾಸ್ತ್ರ ಪರೀಕ್ಷೆಯನ್ನು ಬರೆದಿದ್ದಾರೆ. ಶೇ. 89.22 ರಷ್ಟು ಮಂದಿ ಗಣಿತ ಪರೀಕ್ಷೆ ತೆಗೆದುಕೊಂಡಿದ್ದಾರೆ. ಇದು ಹಿಂದಿನ ವರ್ಷದ ಜೀವಶಾಸ್ತ್ರ ಹಾಗೂ ಗಣಿತ ಪರೀಕ್ಷೆ ತೆಗೆದುಕೊಂಡವರಿಗೆ ಹೋಲಿಸಿದರೆ ಕಡಿಮೆ ಸಂಖ್ಯೆಯಾಗಿದೆ ಎಂದು ಹೇಳಿದ್ದಾರೆ.
ಆ.15 ರೊಳಗೆ CET ಫಲಿತಾಂಶ
Follow Us