Tuesday, April 13, 2021

ಸಿಇಟಿ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜುಲೈ 30 ಮತ್ತು 31ರಂದು ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಅವರು ಬುಧವಾರ ಬೆಳಗ್ಗೆ ಸಿಇಟಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದ್ದರು. ಸಂಜೆ ಪರೀಕ್ಷಾ ವೇಳಾಪಟ್ಟಿಯನ್ನು ಅವರು ಟ್ವೀಟರ್‌ನಲ್ಲಿ ಬಿಡುಗಡೆ ಮಾಡಿದ್ದಾರೆ.
ಕರ್ನಾಟಕ ಸರ್ಕಾರದ ನಿರ್ದೇಶನದ ಅನ್ವಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೊದಲನೇ ವರ್ಷದ/ ಮೊದಲ ಸೆಮಿಸ್ಟರ್ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ ಕೋರ್ಸ್‌ ಮತ್ತು ಬಿ-ಫಾರ್ಮ್ ಮತ್ತು ಫಾರ್ಮಾ-ಡಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಪರೀಕ್ಷೆ ನಡೆಸಲಿದೆ.
– 30/7/2020 ಗುರುವಾರ ಬೆಳಗ್ಗೆ 10.30ರಿಂದ 11.50 ಜೀವಶಾಸ್ತ್ರ (60 ಅಂಕ), ಮಧ್ಯಾಹ್ನ 2.30ರಿಂದ 3.50ರ ತನಕ ಗಣಿತ (60 ಅಂಕ).
– 31/7/2020 ಶುಕ್ರವಾರ ಬೆಳಗ್ಗೆ 10.30ರಿಂದ 11.50 ತನಕ ಭೌತಶಾಸ್ತ್ರ (60 ಅಂಕ), ಮಧ್ಯಾಹ್ನ 2.30ರಿಂದ 3.50ರ ತನಕ ರಸಾಯನ ಶಾಸ್ತ್ರ (60 ಅಂಕಗಳು)
– 1/8/2020 ಶನಿವಾರ ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರ ತನಕ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ (50 ಅಂಕಗಳು).

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!