newsics.com
ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಕೊಲೆಯಾಗಿದ್ದಾರೆ.
ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದರು.
ಘಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್ ಲಾಬೂರಾಮ್ ಆಗಮಿಸಿದ್ದು, ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಇವರ ಹತ್ಯೆ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ.
ಸರಳ ಜೀವನ, ಸರಳ ವಾಸ್ತು, ಸರಳ ಅಕಾಡೆಮಿ, ಮನೆಗಾಗಿ ವಾಸ್ತು, ವಾಸ್ತು ಪರಿಹಾರದ ಮೂಲಕ ಅವರು ಮನೆಮಾತಾಗಿದ್ದರು. ಈವರೆಗೆ 2 ಸಾವಿರಕ್ಕೂ ಹೆಚ್ಚು ಸೆಮಿನಾರ್ಗಳಲ್ಲಿ ಮಾತನಾಡಿದ್ದರು. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ 16 ಪ್ರಶಸ್ತಿ ಪಡೆದಿದ್ದರು. ಸಿವಿಲ್ ಇಂಜಿನಿಯರಿಂಗ್ ಜತೆ ಕಾಸ್ಮಿಕ್ ಆರ್ಕಿಟೆಕ್ಚರ್ನಲ್ಲಿ ಡಾಕ್ಟರೇಟ್ ಪದವಿಯನ್ನೂ ಪಡೆದಿದ್ದರು.