ಮೈಸೂರು: ರಾಮನಗರ ಜಿಲ್ಲೆ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಮಂಜುನಾಥ್ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಹೆಸರಾಂತ ಮಕ್ಕಳ ತಜ್ಞ ವೈದ್ಯ ಡಾ.ಮಂಜುನಾಥ್, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೈಸೂರಿನ ಜೆಎಸ್ಎಸ್ ಕೋವಿಡ್-19 ರೆಪೆರಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 2020ರ ಡಿಸೆಂಬರ್’ನಲ್ಲಿ ವೈದ್ಯ ವೃತ್ತಿಯಿಂದ ನಿವೃತ್ತಿ ಹೊಂದಬೇಕಿತ್ತು.
ತಿರುಪತಿ ದೇಗುಲದ ಇನ್ನೋರ್ವ ಅರ್ಚಕ ಕೊರೋನಾಗೆ ಬಲಿ
ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 5 ವರ್ಷಗಳಿಂದ ಮಕ್ಕಳ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಮಂಜುನಾಥ್ ಅವರು 20 ದಿನಗಳ ಹಿಂದೆ ಕೋವಿಡ್-19 ಸೋಂಕಿಗೆ ತುತ್ತಾಗಿದ್ದರು. ಅಂಟಿಜೆನ್ ಟೆಸ್ಟನಲ್ಲಿ ಡಾ.ಮಂಜುನಾಥ್ ಅವರಿಗೆ ಕೊರೋನಾ ಸೋಂಕು ತಗಲಿರುವುದು ದೃಢಪಟ್ಟಿತ್ತು. ಡಾ.ಮಂಜುನಾಥ್ ಕುಟುಂಬ ಮೈಸೂರಿನಲ್ಲಿ ವಾಸವಿದ್ದ ಕಾರಣ ಮೈಸೂರಿನ ಜೆಎಸ್ಎಸ್ ಅಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.