Thursday, December 2, 2021

ಕೊರೋನಾ ಔಷಧ ಪ್ರಾಯೋಗಿಕ ಪರೀಕ್ಷೆ ವಿಫಲ?

Follow Us

ಲಂಡನ್:  ಮಾರಕ ಕೊರೋನಾ ವಿರುದ್ದದ ಸಮರದಲ್ಲಿ ಮೊದಲ ಹಿನ್ನೆಡೆಯಾಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ನಡೆಸಲಾದ ಮೊದಲ  ಔಷಧ ಪ್ರಾಯೋಗಿಕ ಪರೀಕ್ಷೆ ವಿಫಲವಾಗಿದೆ ಎಂದು ಹೇಳಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಈ ಕುರಿತ ವರದಿ  ಪ್ರಕಟವಾಗಿತ್ತು. ಆದರೆ ತಕ್ಷಣ ಅದನ್ನು ಅಳಿಸಿ ಹಾಕಿರುವುದು ಹಲವು ಸಂಶಯಗಳನ್ನು ಹುಟ್ಟು ಹಾಕಿದೆ. ಸೂಕ್ತ ದತ್ತಾಂಶಗಳನ್ನು ಬಳಸದೆ ವರದಿ ಸಿದ್ದಪಡಿಸಲಾಗಿತ್ತು. ಅದು ಸಮರ್ಪಕವಾಗಿರಲಿಲ್ಲ ಎಂಬ ಸ್ಪಷ್ಟೀಕರಣವನ್ನು ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ.  ಚೀನಾದ ಪ್ರಯೋಗಾಲಯದಲ್ಲಿ ಈ ಪರೀಕ್ಷೆ ನಡೆಸಲಾಗಿತ್ತು. 237 ರೋಗಿಗಳ ಮೇಲೆ ಕ್ಲಿನಿಕಲ್ ಟ್ರಯಲ್ ನಡೆಸಲಾಗಿತ್ತು. ಔಷಧ ಮತ್ತು ಕಂಟ್ರೋಲ್ ಗ್ರೂಪ್ ನಲ್ಲಿ ಇರಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ ಹಲವು ಮಂದಿ ಪರೀಕ್ಷಾ ಹಂತದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...

ಮತ್ತೆ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ

newsics.com ಶಿವಮೊಗ್ಗ: ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ. ಕಾಲೇಜಿನ ಉಳಿದ ವಿದ್ಯಾರ್ಥಿಗಳು ಹಾಗೂ ಇತರ ಸಿಬ್ಬಂದಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿ ಬರಬೇಕಾಗಿದೆ. ಹೀಗಾಗಿ ನಗರದ ಹೊರವಲಯದಲ್ಲಿರುವ ನರ್ಸಿಂಗ್...
- Advertisement -
error: Content is protected !!