Monday, May 17, 2021

ಸಿಎಂ ಯಡಿಯೂರಪ್ಪ’ಗೆ ಕೊರೋನಾ ಸೋಂಕು ದೃಢ

newsics.com

ಬೆಂಗಳೂರು: ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ.

ಇಂದು ಅಸ್ವಸ್ಥಗೊಂಡ ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.‌ ಇಲ್ಲಿ‌ ಕೊರೋನಾ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂಬುದು ದೃಢಪಟ್ಟಿದೆ. ಬಳಿಕ ವೈದ್ಯರ ಸಲಹೆಯ ಮೇರೆಗೆ ಬಿಎಸ್ ವೈ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಕೆಲ ದಿನಗಳ ಹಿಂದಷ್ಟೇ ಅವರು ಕೊರೋ‌ನಾ‌ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು. ಈ ಹಿಂದೆಯೂ ಕೊರೋನಾ ಮೊದಲ ಅಲೆಯ‌ ಸಂದರ್ಭದಲ್ಲಿ ಬಿಎಸ್ ವೈ ಅವರಿಗೆ ಸೋಂಕು ದೃಢಪಟ್ಟಿತ್ತು.

ಮಣಿಪಾಲ್ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದ್ದು, ಎಲ್ಲ ಬಗೆಯ ಪ್ರಾಥಮಿಕ‌ ತಪಾಸಣೆಗಳನ್ನೂ ಮಾಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮಣಿಪಾಲ್ ಆಸ್ಪತ್ರೆಗೆ ಸಿಎಂ ಬಿಎಸ್ ವೈ ದಾಖಲಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಎರಡು ದಿನಗಳ ಹಿಂದೆ ಬೆಳಗಾವಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದ ಸಿಎಂ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲೂ ಆತಂಕ ಶುರುವಾಗಿದೆ. ಇಂದು (ಏ.16) ಬೆಳಗ್ಗೆ ಕೊರೋನಾ ತಡೆಯುವ ನಿಟ್ಟಿನಲ್ಲಿ ಚರ್ಚಿಸಲು ತುರ್ತು ಸಭೆ ಕರೆದಿದ್ದರು. ಈ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು, ಸಚಿವರುಗಳು ಪಾಲ್ಗೊಂಡಿದ್ದರು.

ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಗೆ ದಾಖಲು

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!