Monday, May 17, 2021

ಸಿಎಂ ಯಡಿಯೂರಪ್ಪ ಆರೋಗ್ಯ ಸ್ಥಿರ: ಮಣಿಪಾಲ್ ಆಸ್ಪತ್ರೆ ಹೇಳಿಕೆ

newsics.com
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ತಿಳಿಸಿದೆ.
ಯಡಿಯೂರಪ್ಪ ಅವರಿಗೆ 2ನೇ ಬಾರಿ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ರಾಮಯ್ಯ ಆಸ್ಪತ್ರೆಯಿಂದ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಸಿಎಂ ಆರೋಗ್ಯದ ಬಗ್ಗೆ ಈಗ ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದೆ.
ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಅವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ. ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಕೊರೋನಾಗೆ ಚಿಕಿತ್ಸೆ ಮುಂದುವರೆದಿದೆ. ಶೀಘ್ರದಲ್ಲೇ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!