Saturday, April 17, 2021

18 ಸಾವಿರ ಉದ್ಯೋಗಿಗಳ ವಜಾಗೆ ಕಾಗ್ನಿಜೆಂಟ್ ನಿರ್ಧಾರ

ಬೆಂಗಳೂರು/ನ್ಯೂಯಾರ್ಕ್: ಅಮೆರಿಕದ ಮೂಲದ ಕಾಗ್ನಿಜೆಂಟ್ ಕಂಪನಿ ದೇಶಾದ್ಯಂತ ಸುಮಾರು 18 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗಿದೆ.
12 ಸಾವಿರ ಉದ್ಯೋಗಿಗಳನ್ನು ವಜಾ ಮಾಡುವ ಸಂಬಂಧ ಕಳೆದ ವರ್ಷ ಆದೇಶ ಹೊರಡಿಸಿದ್ದ ಕಂಪನಿ ಇದೀಗ ಮತ್ತೆ 18 ಸಾವಿರ ಉದ್ಯೋಗಿಗಳ ವಜಾಕ್ಕೆ ಮುಂದಾಗಿದೆ ಎಂದು ಕಾಗ್ನಿಜೆಂಟ್ ಕಂಪನಿ ಸಿಇಒ ತಿಳಿಸಿದ್ದಾರೆ.
ಮಧ್ಯಮ ಹಾಗೂ ಹಿರಿಯ ಶ್ರೇಣಿ ಹೊಂದಿರುವ ಉದ್ಯೋಗಿಗಳನ್ನು ಸಂಸ್ಥೆಯಿಂದ ವಜಾಗೊಳಿಸಲು ಮುಂದಾಗುತ್ತಿದ್ದೇವೆ ಎಂದು ಸಿಇಒ ತಿಳಿಸಿದ್ದಾರೆ.
ಕಂಪನಿಯ ಈ ಕ್ರಮದ ವಿರುದ್ಧ ಕರ್ನಾಟಕ ಮತ್ತು ಚೆನ್ನೈನಲ್ಲಿರುವ ರಾಜ್ಯ ಐಟಿ ನೌಕರರ ಸಂಘಗಳು ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿವೆ. 2 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಉದ್ಯೋಗಿಗಳನ್ನು ಹೊಂದಿರುವ ಕಾಂಗ್ನಿಜೆಂಟ್, ದೇಶದ ಎರಡನೇ ಅತಿ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಕಂಪನಿಯಾಗಿದೆ. ಟಾಟಾ ಕನ್ಸಲ್ಟೆಂಟೆನ್ಸಿ ಸರ್ವಿಸಸ್ 4 ಲಕ್ಷ ಉದ್ಯೋಗಿಗಳನ್ನು ಹೊಂದಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!