Saturday, April 1, 2023

ಕೋರ್ಟ್ ಗೆ ಬಂದು ನಿಮ್ಮ ಕಲ್ಪನೆ ಹಂಚಿಕೊಳ್ಳಿ- ಸಚಿವ ನಿತಿನ್ ಗಡ್ಕರಿಗೆ ಸುಪ್ರೀಂ ಆಹ್ವಾನ

Follow Us

ನವದೆಹಲಿ: ಮಾಲಿನ್ಯ ಸಮಸ್ಯೆ ನಿಭಾಯಿಸುವ ನಿಟ್ಟಿನಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ನ್ಯಾಯಾಲಯಕ್ಕೆ ಬಂದು ತಮ್ಮಲ್ಲಿರುವ ನವೀನ ಕಲ್ಪನೆ, ಅಭಿಪ್ರಾಯ ಹಂಚಿಕೊಳ್ಳಬೇಕೆಂದು ವಿನಂತಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ಇದು ಸಚಿವರ ಸಹಯೋಗಕ್ಕೆ ಕೋರಿಕೆಯೇ ಹೊರತು ಸಮನ್ಸ್ ಅಲ್ಲ ಎಂದು ಮುಖ್ಯ ನ್ಯಾಯಾಧೀಶ ನ್ಯಾ.ಎಸ್‌ಎ ಬೋಬ್ಡೆ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ. ವಿದ್ಯುತ್‌ಚಾಲಿತ ವಾಹನಗಳಿಗೆ ಸಂಬಂಧಿಸಿ ಸರ್ಕಾರದ ಕಾರ್ಯನೀತಿಯನ್ನು ಜಾರಿಗೊಳಿಸುವ ಕುರಿತ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ಆಹ್ವಾನ ನೀಡಿದೆ.
ಕೇಂದ್ರ ರಸ್ತೆ ಸಾರಿಗೆ ಸಚಿವರ ಬಳಿ ನವೀನ ಕಲ್ಪನೆಯಿದೆ. ಅವರು ನಿರ್ಧಾರ ಕೈಗೊಳ್ಳುವ ಸ್ಥಾನದಲ್ಲಿರುವುದರಿಂದ ನ್ಯಾಯಾಲಯಕ್ಕೆ ಬಂದು ನಮಗೆ ನೆರವಾಗಬೇಕೆಂದು ಕೋರುತ್ತೇವೆ ಎಂದು ನ್ಯಾ. ಎಸ್‌.ಎ. ಬೋಬ್ಡೆ ಹೇಳಿದರು. ಬಳಿಕ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ನ್ಯಾಯಾಧೀಶರು, ಇದನ್ನು ರಾಜಕೀಯ ದೃಷ್ಟಿಯಿಂದ ಕಾಣುವ ಸಾಧ್ಯತೆಯಿದೆ. ನಾವು ಸಚಿವರಿಗೆ ಸಮನ್ಸ್ ನೀಡುತ್ತೇವೆ ಎಂದು ಭಾವಿಸಬೇಡಿ. ಇದು ಕೋರಿಕೆಯಾಗಿದೆ. ಅಧಿಕಾರ ಸ್ಥಾನದಲ್ಲಿರುವ ಒಬ್ಬರು ನಿರ್ಧಾರ ಕೈಗೊಳ್ಳಬೇಕು ಎಂಬುದು ನಮ್ಮ ಆಶಯವಾಗಿದೆ. ದಯವಿಟ್ಟು ಅವರು ಹಾಜರಾಗುವಂತೆ ನೋಡಿಕೊಳ್ಳಿ ಎಂದು ಸರ್ಕಾರದ ಪರ ವಕೀಲರಿಗೆ ನ್ಯಾಯಪೀಠ ತಿಳಿಸಿತು.
ವಿದ್ಯುತ್ ವಾಹನಗಳ ವಿಷಯ ಇತರ ಹಲವು ವಿಷಯಗಳಿಗೆ ಸಂಬಂಧಿಸಿದ್ದು ಇಂತಹ ಅರ್ಜಿಗಳು ವಿಚಾರಣೆಗೆ ಬಾಕಿಯಿದೆ. ವಾಹನಗಳಿಂದ ಆಗುವ ಮಾಲಿನ್ಯದ ಸಮಸ್ಯೆ ಕೇವಲ ದೆಹಲಿಗೆ ಮಾತ್ರ ಅನ್ವಯವಾಗುವುದಿಲ್ಲ. ಇಡೀ ದೇಶಕ್ಕೆ ಸಂಬಂಧಿಸಿದೆ. ನಿರ್ಧಾರ ಕೈಗೊಳ್ಳುವ ಅಧಿಕಾರವುಳ್ಳ ಅಧಿಕಾರಿಯ ನೆರವಿನಿಂದ ಎಲ್ಲಾ ಅರ್ಜಿಗಳನ್ನೂ ಏಕಕಾಲದಲ್ಲೇ ಪರಿಗಣಿಸುವ ಅಗತ್ಯವಿದೆ ಎಂದು ತಿಳಿಸಿದ ನ್ಯಾಯಪೀಠ, ಈ ಬಗ್ಗೆ ಉತ್ತರಿಸಲು ಕೇಂದ್ರ ಸರ್ಕಾರಕ್ಕೆ 4 ವಾರಗಳ ಅವಕಾಶ ನೀಡಿತು.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!