ನವದೆಹಲಿ: ಅಂತಿಮ ಪದವಿ ಹಾಗೂ ಸ್ನಾತಕ ಪದವಿಗಳ ಕೊನೆಯ ಸೆಮಿಸ್ಟರ್ ಪರೀಕ್ಷೆಯನ್ನು ಸೆಪ್ಟೆಂಬರ್ 30ರೊಳಗೆ ನಡೆಸಲು ಎಲ್ಲ ಸಿದ್ಧತೆ ನಡೆಸಿರುವುದಾಗಿ ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್ (ಯುಜಿಸಿ) ಸುಪ್ರೀಂಗೆ ತಿಳಿಸಿದೆ.
ಪರೀಕ್ಷೆ ನಡೆಸುವ ವಿಚಾರವಾಗಿ ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಪರೀಕ್ಷೆ ನಡೆಸುವ ನಿರ್ಧಾರದಿಂದ ಹಿಂದೆ ಸರಿಯುವ ಯೋಚನೆಯೂ ಇಲ್ಲ ಎಂದು ಸ್ಪಷ್ಟಪಡಿಸಿರುವ ಯುಜಿಸಿ, ಸೆಪ್ಟೆಂಬರ್ 30ರೊಳಗೆ ಪರೀಕ್ಷೆ ನಡೆಸಬೇಕು ಎಂಬ ತನ್ನ ನಡೆಯನ್ನು ಸುಪ್ರೀಂ ಕೋರ್ಟ್ ಎದುರು ಬಲವಾಗಿ ಸಮರ್ಥಿಸಿಕೊಂಡಿದೆ.
ಆ.6 ಅಥವಾ 8ಕ್ಕೆ ಎಸ್ಸೆಸ್ಸೆಲ್ಸಿ ರಿಸಲ್ಟ್
ಕೊರೋನಾ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 30ರೊಳಗೆ ಅಂತಿಮ ವರ್ಷದ ಪರೀಕ್ಷೆ ಮಾಡಿ ಮುಗಿಸುವಂತೆ ಕಾಲೇಜುಗಳಿಗೆ, ಯೂನಿವರ್ಸಿಟಿಗಳಿಗೆ ಜುಲೈ 6ರಂದು ಯುಜಿಸಿ ನಿರ್ದೇಶನ ನೀಡಿರುವ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಎದುರು ಯುಜಿಸಿ ತನ್ನ ಪ್ರತಿಕ್ರಿಯೆ ನೀಡಿದೆ. ಹಲವು ಪರಿಣತ ಸದಸ್ಯರ ಸಮಿತಿ ನೀಡಿರುವ ಶಿಫಾರಸಿನ ಮೇರೆಗೆ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಇದನ್ನು ಮತ್ತೆ ಪರಿಷ್ಕರಿಸುವ ಅಗತ್ಯ ಕಾಣುತ್ತಿಲ್ಲ ಎಂದು ಯುಜಿಸಿ ಹೇಳಿದೆ.