Monday, August 8, 2022

ಬೆಂಗಳೂರಿನಲ್ಲಿ 3925, ರಾಜ್ಯದಲ್ಲಿ 9886 ಮಂದಿಗೆ ಕೊರೋನಾ, 100 ಜನ ಸಾವು

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಅ.3) ಕೊರೋನಾ ಅಬ್ಬರಿಸಿದೆ. ಇಂದು ಹೊಸದಾಗಿ 9,886 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 6,30,516ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 100 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 9,219ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 3925 ಜನರಿಗೆ ಕೊರೋನಾ ಸೋಂಕು ತಗುಲಿದ್ದು , ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 2,45,700 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 21 ಜನರು ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 3045 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 2001 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಒಟ್ಟು 189362 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಇಂದು 8,989 ಜನರು ಸೇರಿದಂತೆ ಒಟ್ಟು 5,08,495 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 1,12,783 ಸಕ್ರಿಯ ಸೋಂಕಿತರಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!