Monday, November 29, 2021

ದೇಶದಲ್ಲಿ ಒಂದೇ ದಿನ 49 ಜನ ಸಾವು, 1,486 ಮಂದಿಗೆ ಸೋಂಕು

Follow Us

ನವದೆಹಲಿ: ದೇಶದಲ್ಲಿ ಬುಧವಾರ ಒಂದೇ ದಿನ ಹೊಸದಾಗಿ 1,486 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. 49 ಜನ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಸೋಂಕಿತರ ಸಂಖ್ಯೆ 20,471 ಕ್ಕೆ ಏರಿಕೆಯಾಗಿದೆ. ಈವರೆಗೆ 652 ಜನ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. 3,959 ಮಂದಿ ಗುಣಮುಖರಾಗಿದ್ದಾರೆ. 15,859 ವಿವಿಧ ರಾಜ್ಯಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 5,221 ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಒಟ್ಟು 251 ಮಂದಿ ಸಾವಿಗೀಡಾಗಿದ್ದಾರೆ. ದೆಹಲಿಯಲ್ಲಿ ಒಟ್ಟು 2,156 ಪ್ರಕರಣಗಳು ದಾಖಲಾಗಿದ್ದು, 47 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 1,596 ಪ್ರಕರಣಗಳು ಪತ್ತೆಯಾಗಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದಲ್ಲಿ 1,801 ಪ್ರಕರಣಗಳು ಈವರೆಗೆ ವರದಿಯಾಗಿದ್ದು, 25 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!