ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ ರಣಕೇಕೆ ಮುಂದುವರಿಸಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 54, 736 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 17 ಲಕ್ಷದ ಗಡಿ ದಾಟಿದೆ. ದೇಶದಲ್ಲಿ ಇದೀಗ ಕೊರೋನಾ ಸೋಂಕಿತರ ಸಂಖ್ಯೆ 17, 50, 724ಕ್ಕೆ ತಲುಪಿದೆ.
ದೇಶದ ಕೋವಿಡ್ ಆಸ್ಪತ್ರೆಗಳಲ್ಲಿ 5, 67, 730 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ 853 ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾದಿಂದ ದೇಶದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 37, 364ಕ್ಕೆ ತಲುಪಿದೆ.