ನವದೆಹಲಿ: ಮಾರಕ ಕೊರೋನಾ ರಣಕೇಕೆ ಮುಂದುವರಿಸಿದೆ. ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಐವತ್ತು ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ ಹೊಸದಾಗಿ 1290 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೋನಾದಿಂದ ಇದುವರೆಗೆ ದೇಶದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 82,066ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ ಹೊಸದಾಗಿ 90, 123 ಮಂದಿಗೆ ಕೊರೋನಾ ಸೋಂಕು ತಗುಲಿದೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಐವತ್ತು ಲಕ್ಷ ಮೀರಿದೆ. ಇದೀಗ ಕೊರೋನಾ ಸೋಂಕಿತರ ಸಂಖ್ಯೆ 50, 20, 360ಕ್ಕೆ ತಲುಪಿದೆ.
ಕೊರೋನಾ ಸೋಂಕಿಗೆ ತುತ್ತಾಗಿದ್ದ 39, 42, 361 ಮಂದಿ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 9, 95, 933 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ