ನವದೆಹಲಿ: ಮಾರಕ ಕೊರೋನಾದ ಅಟ್ಟಹಾಸ ಮುಂದುವರಿದಿದೆ. ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 82, 170 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 60 ಲಕ್ಷ ದಾಟಿದೆ. ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ ಇದೀಗ 60,74, 703ಕ್ಕೆ ತಲುಪಿದೆ. ಕೊರೋನಾ ಹೊಸದಾಗಿ 1039 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 95,542ಕ್ಕೆ ತಲುಪಿದೆ.
ಆಸ್ಪತ್ರೆಗಳಲ್ಲಿ 9.62, 640 ಕೊರೋನಾ ಸೋಂಕಿತರು ಚಿಕಿತ್ಸೆ ಪ಼ಡೆಯುತ್ತಿದ್ದಾರೆ. ಕೊರೋನಾ ಸೋಂಕಿತರಾಗಿದ್ದ 50, 16, 521 ಮಂದಿ ಗುಣಮುಖರಾಗಿದ್ದಾರೆ. ಇದು ಆಶಾದಾಯಕ ಬೆಳವಣಿಗೆಯಾಗಿದೆ. ಕೊರೋನಾ ಸೋಂಕಿಗೆ ತುತ್ತಾಗಿದ್ದ ಐವತ್ತು ಲಕ್ಷ ಮಂದಿ ಗುಣಮುಖರಾಗಿರುವುದು ಆರೋಗ್ಯ ಕಾರ್ಯಕರ್ತರ ಆತ್ಮ ವಿಶ್ವಾಸ ಹೆಚ್ಚಿಸಿದೆ.