Tuesday, April 13, 2021

ದೇಶದಲ್ಲಿ ಏಳು ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ನವದೆಹಲಿ: ಎಷ್ಟೆ ಬಿಗಿ ಕ್ರಮ ಕೈಗೊಂಡರೂ ದೇಶದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ  22, 252 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ  7,19, 665ಕ್ಕೆ ತಲುಪಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 2, 59, 557 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ ಕೂಡ 20000 ಮೀರಿದೆ. ಕಳೆದ 24 ಗಂಟೆ ಅವಧಿಯಲ್ಲಿ 467 ಮಂದಿ ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ ದೇಶದಲ್ಲಿ 20, 160ಕ್ಕೆ ಏರಿದೆ. ಮಹಾರಾಷ್ಟ್ರ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಈಗಲೂ ಮೊದಲ ಸ್ಥಾನದಲ್ಲಿ ಗುರುತಿಸಿಕೊಂಡಿದೆ

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!