Monday, April 12, 2021

ದೇಶದಲ್ಲಿ ಎರಡು ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ನವದೆಹಲಿ: ಮಾರಕ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಎರಡು ಲಕ್ಷ ದಾಟಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ  8909 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 207615ಕ್ಕೆ ತಲುಪಿದೆ. ಇದು ಜನವರಿ 30ರಂದು ದೇಶದಲ್ಲಿ ಮೊದಲ ಕೊರೋನಾ  ಪ್ರಕರಣ ವರದಿಯಾದ ಬಳಿಕ ದೃಢಪಟ್ಟಿರುವ ಅತ್ಯಧಿಕ ಸಂಖ್ಯೆಯಾಗಿದೆ.  1,01497 ಮಂದಿ ಕೊರೋನಾ ಸಂಬಂಧಪಟ್ಟಂತೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 100303 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.  ಕೊರೋನಾ ಕಳೆದ 24 ಗಂಟೆ ಅವಧಿಯಲ್ಲಿ  217 ಮಂದಿಯ ಪ್ರಾಣ ಅಪಹರಿಸಿದೆ.  ದೇಶದಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ ಇದೀಗ  5815ಕ್ಕೆ ಏರಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!